ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ಜನ್ಮದಿನ ಇನ್ನು ಮುಂದೆ ‘ಸ್ಫೂರ್ತಿ ದಿನ’: ಸ್ಪೂರ್ತಿಯ ಚಿಲುಮೆಗೆ ಸರ್ಕಾರದಿಂದ ವಿಶೇಷ ಗೌರವ
ಈ ಬಗ್ಗೆ ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದು, ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ’ ಎಂದಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ @BSBommai ಅವರಿಗೆ ಧನ್ಯವಾದಗಳು.
— Sunil Kumar Karkala (@karkalasunil) September 15, 2022
ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.
