• January 1, 2026

ಗಂಧದ ಗುಡಿ ಟ್ರೈಲರ್ ನೋಡಿ ಮೆಚ್ಚಿಕೊಂಡ ಪ್ರಧಾನಿ ಮೋದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದೆ. ಇದೇ ಅಕ್ಟೋಬರ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಆಗುತ್ತಿದ್ದು ಈ ಹಿನ್ನೆಲೆಯಲ್ಲಿ ಇದೀಗ ಟ್ರೈಲರ್ ರಿಲೀಸ್ ಆಗಿದೆ. ಗಂಧದ ಗುಡಿ ಟ್ರೈಲರ್ ನೋಡಿ ಪ್ರತಿಯೊಬ್ಬರು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಟ್ರೈಲರ್ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಟ್ರೈಲರ್ ರಿಲೀಸ್ ಆದ ಕೆಲವೇ ಕೆಲವು ಗಂಟೆಗಳಲ್ಲಿ ಲಕ್ಷಾಂತರ ಮಂದಿ ಟ್ರೈಲರ್ ವೀಕ್ಷಿಸಿದ್ದು ಟ್ರೈಲರ್ ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಇಂದು ಪುನೀತ್ ನಮ್ಮೊಂದಿಗೆ ಇರಬೇಕಿತ್ತು ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಗಂಧದ ಗುಡಿ ಟ್ರೈಲರ್ ನ ಲಿಂಕ್ ಅನ್ನು ಅಶ್ವೀನಿ ಪುನೀತ್ ರಾಜ್ ಕುಮಾರ್ ಮೋದಿ ಅವರಿಗೆ ಶೇರ್ ಮಾಡಿದ್ದರು. ಟ್ರೈಲರ್ ನೋಡಿದ ಪ್ರಧಾನಿ ಮಚ್ಚುಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಮೋದಿ, ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ವ್ಯಕ್ತಿಯಾಗಿದ್ದರು, ಶಕ್ತಿಯಿಂದ ತುಂಬಿದ ಅಪ್ಪು ಪ್ರತಿಭೆಗೆ ಯಾರು ಸರಿಸಾಟಿಯಿಲ್ಲ. `ಗಂಧದಗುಡಿ’ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯಕ್ಕೆ ಅರ್ಪಣೆ. ಚಿತ್ರತಂಡದ ಪ್ರಯತ್ನಕ್ಕೆ ನನ್ನ ಶುಭಹಾರೈಕೆಗಳು ಎಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ಅಕ್ಟೋಬರ್ 28ರಂದು ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಗಂಧದ ಗುಡಿ ಸಾಕ್ಷ್ಯುಚಿತ್ರ ಬಿಡುಗಡೆ ಆಗಲಿದೆ. ಈಗಾಗ್ಲೆ ಅದಕ್ಕಾಗಿ ಅಪ್ಪು ಫ್ಯಾನ್ಸ್ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಅಪ್ಪು ನಟನೆಯ ಕೊನೆಯ ಸಿನಿಮಾವನ್ನು ಕಣ್ಮುಂಬಿಕೊಳ್ಳಲು ಅಭಿಮಾನಿಗಳು ಕಾದು ಕೂತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now