ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶ್ರೀವಿಷ್ಣು ಅವತಾರದಲ್ಲಿ ಪುನೀತ್ ರಾಜ್ ಕುಮಾರ್ ನೋಡಿ ಭಾವುಕರಾದ ಫ್ಯಾನ್ಸ್
ನಾಗೇಂದ್ರ ಪ್ರಸಾದ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಹಾಗೂ ಸಂಗೀತ ಶೃಂಗೇರಿ ನಟಿಸಿರುವ ಲಕ್ಕಿಮ್ಯಾನ್ ಸಿನಿಮಾದಲ್ಲಿ ಪುನೀತ್ ಶ್ರೀಕೃಷ್ಣನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ನಲ್ಲಿ ಅಪ್ಪು ಅವರನ್ನು ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ.
ರಿಯಲ್ ಲೈಫ್ ನಲ್ಲಿ ಲಕ್ಷಾಂತರ ಅಭಿಮಾನಿಗಳ ಪಾಲಿನ ದೇವರಾಗಿದ್ದ ಪುನೀತ್ ರಾಜ್ ಕುಮಾರ್ ಸಿನಿಮಾದಲ್ಲೂ ದೇವರಾಗಿ ಬಣ್ಣ ಹಚ್ಚಿದ್ದಾರೆ. ಪುನೀತ್ ನಟನೆಯ ಕೊನೆಯ ಕಮರ್ಷಿಯಲ್ ಸಿನಿಮಾವಾಗಿರೋ ಲಕ್ಕಿಮ್ಯಾನ್ ರಾಜ್ಯಾದ್ಯಂತ ಸುಮಾರು 300ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆ ಆಗಲಿದೆ.
ತಮಿಳಿನ ಓ ಮೈ ಕಡವುದೇ ಸಿನಿಮಾದ ರಿಮೇಕ್ ಆಗಿರೋ ಲಕ್ಕಿಮ್ಯಾನ್ ಪುನೀತ್ ನಟನೆಯ ಕೊನೆಯ ಸಿನಿಮಾ ಅನ್ನೋ ಕಾರಣಕ್ಕೆ ಸಾಕಷ್ಟು ಕುತೂಹಲ ಮೂಡಿಸಿದೆ. ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ್ದ ಪಾತ್ರವನ್ನು ಕನ್ನಡದಲ್ಲಿ ಪುನೀತ್ ರಾಜ್ ಕುಮಾರ್ ಮಾಡಿದ್ದಾರೆ.
