ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಡ್ರಸ್ ಕೋಟ್ ನಿಗದಿ
ಕಾರ್ಯಕ್ರಮಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿದ್ದು ಈಗಾಗ್ಲೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಸಾಕಷ್ಟು ಮಂದಿಯ ಕೈ ಸೇರಿದೆ. ಸ್ಯಾಂಡಲ್ ವುಡ್ ರಂಗದವರ ಜೊತೆಗೆ ಪರಭಾಷೆಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಪ್ರೀರಿಲೀಸ್ ಈವೆಂಟ್ ಬಗ್ಗೆ ಅಶ್ವೀನಿ ಪುನೀತ್ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪುನೀತ ಪರ್ವ ಕಾರ್ಯಕ್ರಮ ಅಕ್ಟೋಬರ್ 21ರ ಶುಕ್ರವಾರದಂದು ಸಂಜೆ 6 ಗಂಟೆಗೆ ಆರಂಭಗೊಳ್ಳಲಿದೆ. ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯಲಿದೆ. ಇನ್ನು ಈ ಕಾರ್ಯಕ್ರಮಕ್ಕೆ ಬರುವ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸಿ ಬನ್ನಿ ಎಂದು ಅಶ್ವೀನಿ ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ.
