• January 2, 2026

ಪುನೀತ್ ರಾಜ್ ಕುಮಾರ್ ಕುರಿತು ಭಾವುಕ ಪತ್ರ ಬರೆದ ಅಶ್ವಿನಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ನಮ್ಮೊಂದಿಗಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಲು ಯಾರಿಗೂ ಸಾಧ್ಯವಿಲ್ಲ. ಕೋಟ್ಯಾಂತರ ಮಂದಿ ಅಪ್ಪು ನೆನಪಿನಲ್ಲೆ ದಿನ ದೂಡುತ್ತಿದ್ದಾರೆ. ಇಂದು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಪತಿಯ ಕುರಿತಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ ಬರೆದಿದ್ದಾರೆ. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ, ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಅಶ್ವಿನಿ ಬರೆದುಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಪರಿಗಣಿಸಿ ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಜೂನಿಯರ್ ಎನ್ ಟಿ ಆರ್ ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದು, ರಜನಿಕಾಂತ್ ಅವರ ಒಪ್ಪಿಗೆ ಪತ್ರ ಇನ್ನಷ್ಟೇ ಸಿಗಬೇಕಿದೆ ಎಂದು ಸಿಎಂ ತಿಳಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now