• March 14, 2026

ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೆ ಇರುತ್ತಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಕ್ರಷ್ ಗೆ ಇದೀಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳುತ್ತಿರುವ ಕೊಡಗಿನ ಬೆಡಗಿನ ಹೈದಾಬಾದ್​​ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡು ಕಡೆ ರಶ್ಮಿಕಾ ಬ್ಯುಸಿಯಾಗಿದ್ದಾರೆ. ಇದೀಗ ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಮಿಷನ್ ಮಜ್ನು ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ ಬಿಟೌನ್ ಪ್ರವೇಶಿಸಿದ್ರು ಅದಕ್ಕೂ ಮೊದಲು ಗುಡ್ ಬೈ ಸಿನಿಮಾ ರಿಲೀಸ್ ಆಗ್ತಿದೆ. ಹೀಗಾಗಿ ಮೊದಲ ಸಿನಿಮಾದ ಮೇಲೆ ರಶ್ಮಿಕಾ ಸಾಕಷ್ಟು ನಿರೀಕ್ಷೆ ಇಟ್ಟಕೊಂಡಿದ್ದು ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಬಿಗ್ ಬಿ ಅಮಿತಾಭ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು ಇತ್ತೀಚೆಗಷ್ಟೇ ಸಿನಿಮಾದ ಟ್ರೈಲರ್ ರಿಲಿಸ್ ಆಗಿದೆ. ಟ್ರೈಲರ್ ಗೆ ಉತ್ತರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬಿಗ್ ಬಿ ಅಮಿತಾಭ್ ಮತ್ತು ನೀನಾ ಗುಪ್ತ ಮಗಳಾಗಿ ನಟಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now