ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಲೈನ್ ಮ್ಯಾನ್” ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ತೆಲುಗು ನಟ
ತ್ರಿಗುಣ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಆರ್.ಜಿ.ವಿ ನಿರ್ದೇಶನದ “ಕೊಂಡ” ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ ಹಾಗೂ “ತರ್ಲೆನನ್ಮಗ” ಖ್ಯಾತಿಯ ಅಂಜಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹಳ್ಳಿ ಕಡೆ ದಿನ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ನಿಂದಾಗುವ ತೊಂದರೆ ಸರಿಪಡಿಸುವ “ಲೈನ್ ಮ್ಯಾನ್” ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ “ಲೈನ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ ಪಿ , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ.
