• January 1, 2026

ಮತ್ತೊಂದು ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ರಾಗಿಣಿ

ಕೆಲ ಸಮಯದಿಂದ ಸಿನಿಮಾಗಳಿಂದ ದೂರವಾಗಿದ್ದ ನಟಿ ರಾಗಿಣಿ ದ್ವಿವೇದಿ ಇದೀಗ ಒಂದಂರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗ್ಲೆ ಕೆಲ ಸಿನಿಮಾಗಳ ಶೂಟಿಂಗ್ ನಲ್ಲಿ ಭಾಗಿಯಾಗಿರುವ ರಾಗಿಣಿ ಇದೀಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸದ್ಯ ರಾಗಿಣಿ ವಿಭಿನ್ನ ಕಥಾಹಂದರ ಹೊಂದಿರುವ ಶಂಕರ್ ಕೋನಮಾನಹಳ್ಳಿ ನಿರ್ದೇಶನದ  “ಶಂಭೋ ಶಿವ ಶಂಕರ” ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರ ತೆರೆಗೆ ಬರುವ ಮುನ್ನವೇ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಮತ್ತೊಂದು ಸಿನಿಮಾದಲ್ಲಿ ರಾಗಿಣಿ ನಟಿಸಲಿದ್ದಾರೆ. ರಾಗಿಣಿ ಹಾಗೂ ಶಂಕರ್ ಕೋನಮಾನಹಳ್ಳಿ ಕಾಂಬಿನೇಷನ್ ನ ಹೊಸ ಸಿನಿಮಾ ನವೆಂಬರ್ ನಲ್ಲಿ ಚಿತ್ರೀಕರಣ ಶುರುವಾಗಲಿದೆ. ಇತ್ತೀಚೆಗೆ ರಾಗಿಣಿ ಮತ್ತಷ್ಟು ಸ್ಲಿಮ್ ಆಗಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ರಾಗಿಣಿಯ ಹಾಟ್ ಫೋಟೋಸ್ ನೋಡಿ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now