• June 20, 2026

ಟಿಪ್ಪು ಸುಲ್ತಾನ್ ಕುರಿತ ‘ಶಾನುಭೋಗರ ಮಗಳು’ ಸಿನಿಮಾದ ನಾಯಕಿಯಾ ರಾಗಿಣಿ ಪ್ರಜ್ವಲ್

ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ನೃತ್ಯಗಾರ್ತಿಯಾಗಿ ಸಾಕಷ್ಟು ಖ್ಯಾತಿ ಘಳಿಸಿದ್ದಾರೆ. ಈ ಹಿಂದೆ ರಿಷಭಪ್ರಿಯ ಹೆಸರಿನ ಕಿರು ಚಿತ್ರದಲ್ಲಿ ನಟಸುವ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ರಾಗಿಣಿ ಬಳಿಕ ಲಾ ಸಿನಿಮಾದಲ್ಲಿ ನಾಯಕಿಯಾಗಿ ಗುರುತಿಸಿಕೊಂಡರು. ಆ ಬಳಿಕ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ರಾಗಿಣಿ ಇದೀಗ ಹೊಸ ಸಿನಿಮಾದ ನಾಯಕಿಯಾಗಿದ್ದಾರೆ. ಚಿತ್ರಕ್ಕೆ ಶಾನುಭೋಗರ ಮಗಳು ಎಂದು ಹೆಸರಿಡಲಾಗಿದೆ. ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈ ಚಿತ್ರದ ನಿರ್ದೇಶಕರು.  ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  “ಶ್ಯಾನುಭೋಗರ ಮಗಳು” ಚಿತ್ರದ ಪ್ರಮುಖಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸುತ್ತಿದ್ದಾರೆ. ಮೇಘಶ್ರೀ, ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ‌ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದ್ದು, ಆ ಪಾತ್ರಕ್ಕಾಗಿ  ಆಯ್ಕೆ ಕಾರ್ಯ ನಡೆಯುತ್ತಿದೆ.  ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ‘ಲಾ’ದಂತಹ ಕ್ರೈಮ್ ಥ್ರಿಲ್ಲರ್ ಸಿನಿಮಾದಲ್ಲಿ ನಟಿಸಿದ್ದ ರಾಗಿಣಿ ಚಂದ್ರನ್, ಈ ಬಾರಿ ಮತ್ತೊಂದು ವಿಭಿನ್ನ ಕಥೆಯೊಂದಿಗೆ ಸ್ಯಾಂಡಲ್‌ವುಡ್‌ ಮರಳಿರುವುದು ವಿಶೇಷ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now