ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ರಾಜಕುಮಾರ’ನಿಗೆ ಕರ್ನಾಟಕ ರತ್ನ ಪ್ರದಾನ ಮಾಡಲಿದ್ದಾರೆ ಆ ‘ಸೂಪರ್ ಸ್ಟಾರ್ ‘
ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರ್ಕಾರ ಈಗಾಗಲೇ ನಿರ್ಧರಿಸಿದೆ. ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವದ ದಿನ ಸಂಜೆ ನಾಲ್ಕು ಗಂಟೆಗೆ ಸರಿಯಾಗಿ ವಿಧಾನಸೌಧದ ಮುಂಭಾಗದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಹೆಸರು ಮಾಡಿದ್ದು, ಕನ್ನಡಿಗರೇ ಆದ, ಡಾ.ರಾಜ್ ಕುಮಾರ್ ಕುಟುಂದ ಜೊತೆ ಉತ್ತಮ ಬಾಂದವ್ಯ ಹೊಂದಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎನ್ನಲಾಗುತ್ತಿದೆ.
1992ರಿಂದ ಕರ್ನಾಟಕ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು ಇದುವರೆಗೂ 9 ಮಂದಿ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗಿದೆ. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ನೀಡುತ್ತದೆ. 1992ರಲ್ಲಿ ಡಾ. ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು.ಇದೀಗ ಪುನೀತ್ ರಾಜ್ ಕುಮಾರ್ ಅವರ ಅಸಾಧಾರಣ ಸಾಧನೆಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.
