• January 1, 2026

ಖ್ಯಾತ ಹಾಸ್ಯ ನಟನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್‌ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ರಾಜು ಶ್ರೀವಾಸ್ತವ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now