ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಮಂತಾ ನಟನೆಯ ‘ಯಶೋದಾ’ ಟ್ರೇಲರ್ ಬಿಡುಗಡೆ ಮಾಡಿದ ರಕ್ಷಿತ್ ಶೆಟ್ಟಿ
ಇಂದು ಸಂಜೆ ‘ಯಶೋದ’ ಚಿತ್ರದ ಟ್ರೈಲರ್ ಐದು ಭಾಷೆಯಲ್ಲೂ ಬಿಡುಗಡೆಯಾಗಿದೆ. ಕನ್ನಡದ ಅವತರಣಿಕೆಯನ್ನು ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದರೆ, ತೆಲುಗಿನಲ್ಲಿ ವಿಜಯ್ ದೇವರಕೊಂಡ, ತಮಿಳಿನಲ್ಲಿ ಸೂರ್ಯ, ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಮತ್ತು ಹಿಂದಿಯಲ್ಲಿ ವರುಣ್ ಧವನ್ ಬಿಡುಗಡೆ ಮಾಡಿದ್ದಾರೆ.
ಟ್ರೈಲರ್ನಲ್ಲಿ ಸಮಂತಾ ಬಾಡಿಗೆ ತಾಯಿ ಯಶೋದಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿದ ವಿಜಯ್ ದೇವರಕೊಂಡ, ಸೂರ್ಯ, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್ ಮತ್ತು ವರುಣ್ ಧವನ್ ಗೆ ನಿರ್ಮಾಪಕ ಶಿವಲೆಂಕ ಕೃಷ್ಣ ಪ್ರಸಾದ್ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ಟ್ರೈಲರ್ ಗೆ ಎಲ್ಲಾ ಭಾಷೆಗಳಲ್ಲೂ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ‘ಯಶೋದಾ’ ಹೊಸ ಶೈಲಿಯ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಹರಿ-ಹರೀಶ್ ಚಿತ್ರವನ್ನು ಜಂಟಿಯಾಗಿ ನಿರ್ದೇಶಿಸಿದ್ದಾರೆ. ನಿರ್ಮಾಪಕ ಶಿವಲೆಂಕ ಕೃಷ್ಣ ಪ್ರಸಾದ್ ಶ್ರೀದೇವಿ ಮೂವಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ.
