• June 13, 2026

ರಾಜ್ ಬಿ ಶೆಟ್ಟಿಗೆ ಜೋಡಿಯಾದ ಮೋಹಕ ತಾರೆ: ರಮ್ಯಾ ಹೊಸ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್

ಕಳೆದ ಕೆಲ ದಿನಗಳ ಹಿಂದೆ ನಟಿ ರಮ್ಯಾ ಹಾಗೂ ನಟ ರಾಜ್ ಬಿ ಶೆಟ್ಟಿ ಒಟ್ಟಿಗೆ ಕಾಣಿಸಿಕೊಂಡು ಸದ್ದು ಮಾಡಿದ್ದರು. ಅದಾಗ್ಲೆ ಇವರಿಬ್ಬರು ಒಟ್ಟಿಗೆ ಸಿನಿಮಾ ಮಾಡ್ತಾರೆ ಎಂದು ಹೇಳಲಾಗಿತ್ತು. ಅದೀಗ ಈ ಸುದ್ದಿ ನಿಜವಾಗಿದ್ದು ವಿಜಯ ದಶಮಿಯಂದು ರಮ್ಯಾ ಅಧಿಕೃತ ಮಾಹಿತಿ ನೀಡಿದ್ದಾರೆ. Apple Box Studios ಹೆಸರಿನಲ್ಲಿ ನಟಿ ರಮ್ಯಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಮೂಲಕ ಒಳ್ಳೆಯ ಸಿನಿಮಾ ನೀಡುವುದಾಗಿ ಅವರು ನಾಡಿನ ಜನತೆಗೆ ಆಶ್ವಾಸನೆ ನೀಡಿದ್ದು ಇದೀಗ ವಿಜಯದಶಮಿ ಪ್ರಯುಕ್ತ ರಮ್ಯಾ ಸಿನಿಮಾದ ಕುರಿತಾಗಿ ಅಪ್‌ಡೇಟ್ ನೀಡಿದ್ದಾರೆ. ಚಿತ್ರಕ್ಕೆ ಸ್ವಾತಿ ಮುತ್ತಿನ ಮಳೆಹನಿಯೇ ಎಂದು ಶೀರ್ಷಿಕೆ ಇಡಲಾಗಿದೆ ಎಂದು ತಿಳಿಸಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಪ್ರೀ ಪ್ರೊಡಕ್ಷನ್ ಹಂತದಲ್ಲಿದ್ದು ರಾಜ್ ಬಿ ಶೆಟ್ಟಿ ನಟನೆಯ ‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಕೆಲಸ ಮಾಡಿದ್ದ ತಂಡವೇ ಇಲ್ಲೂ ಕೆಲಸ ಮಾಡಲಿದೆ. ಅಂದ ಹಾಗೆ ಇದು ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಬಣ್ಣದ ಗೆಜ್ಜೆ ಸಿನಿಮಾದ ಸೂಪರ್ ಹಿಟ್ ಹಾಡಿನ ಸಾಲಾಗಿದೆ. ಸದ್ಯ ಸಿನಿಮಾದ ಟೈಟಲ್ ಪೋಸ್ಟರ್ ರಿಲೀಸ್ ಆಗಿದ್ದು ಸದ್ಯದಲ್ಲೇ ಸಿನಿಮಾ ಸೆಟ್ಟೇರಲಿದೆ. ಚಿತ್ರಕ್ಕೆ ರಾಜ್ ಬಿ ಶೆಟ್ಟಿ ನಟನೆಯ ಜೊತೆಗೆ ನಿರ್ದೇಶನವನ್ನು ಮಾಡ್ತಿದ್ದಾರೆ. ವಿಶೇಷ ಎಂದರೆ ಸಿನಿಮಾದಲ್ಲಿ ರಮ್ಯಾ ಜೊತೆ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಕಾಂಬಿನೇಷನ್ ನಲ್ಲಿ ಸಿನಿಮಾ ಬರ್ತಿದೆ ಎನ್ನುವ ಸುದ್ದಿ ಈಗಾಗಲೇ ವೈರಲ್ ಆಗಿತ್ತು. ಇಬ್ಬರನ್ನು ಒಟ್ಟಿಗೆ ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ. ಇದೀಗ ಟೈಟಲ್ ರಿವೀಲ್ ಮಾಡಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now