• December 22, 2025

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಿಂದ ಹೊರ ಬಂದ ರಮ್ಯಾ: ಮೋಹಕ ತಾರೆ ಜಾಗಕ್ಕೆ ಮತ್ತೊಬ್ಬ ನಟಿ ಎಂಟ್ರಿ

ಮೋಹಕ ತಾರೆ ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸುದ್ದಿ ಕೇಳಿ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ರು. ರಮ್ಯಾ ನಟನೆಯನ್ನು ಕಣ್ಮುಂಬಿಕೊಳ್ಳೋಕೆ ಕಾದು ಕೂತಿದ್ರು, ಆದರೆ ಇದೀಗ ರಮ್ಯಾ ಅಭಿಮಾನಿಗಳಿಗೆ ನಿರಾಸೆಯಾಗುವ ಸುದ್ದಿಯೊಂದನ್ನು ಸ್ವತಃ ರಮ್ಯಾ ನೀಡಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ರಮ್ಯಾ ಇತ್ತೀಚೆಗಷ್ಟೇ ಆ್ಯಪಲ್ ಬಾಕ್ಸ್ ಸಂಸ್ಥೆ ಹುಟ್ಟುಹಾಕಿ ಆ ಮೂಲಕ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು. ಅಲ್ಲದೆ ಆ್ಯಪಲ್ ಬಾಕ್ಸ್ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ರಮ್ಯಾ ನಟನೆಯಿಂದ ಮತ್ತೆ ದೂರವಾಗಿದ್ದಾರೆ.   ಸದ್ಯ ರಮ್ಯಾ ಜಾಗಕ್ಕೆ ಸಿರಿ ರವಿಕುಮಾರ್ ಎಂಟ್ರಿಕೊಡ್ತಿದ್ದಾರೆ. ಈ ಬಗ್ಗೆ ಸ್ವತಃ ರಮ್ಯಾ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸಿರಿ ರವಿಕುಮಾರ್ ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆದುಕೊಂಡಿದ್ದು ಈ ಚಿತ್ರದಲ್ಲಿ ರಮ್ಯಾ ನಿರ್ಮಾಪಕಿ ಮಾತ್ರವೇ ಆಗಿರಲಿದ್ದಾರೆ ಎಂದು ತಿಳಿಸಿದ್ದಾರೆ.     ಸ್ವಾತಿ ಮುತ್ತಿನ ಮಳೆ ಹನಿಯೇ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ರಾಜ್ ಬಿ ಶೆಟ್ಟಿ ಚಿತ್ರ ನಿರ್ದೇಶನ ಮಾಡುತ್ತಿದ್ದು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಳ್ತಿದ್ದಾರೆ. ಜೊತೆಗೆ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ಒಟ್ನಲ್ಲಿ ಸಾಕಷ್ಟು ವರ್ಷದಿಂದ ರಮ್ಯಾ ನಟನೆಯ ಸಿನಿಮಾಗಾಗಿ ಕಾದು ಕೂತಿದ್ದ ಅಭಿಮಾನಿಗಳಿಗೆ ರಮ್ಯಾ ತೀರ್ಮಾನ ಬೇಸರ ಮೂಡಿಸಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now