• June 15, 2026

ಅಮಿತಾಬ್ ಬಚ್ಚನ್ ಜೊತೆ ಕೆಲಸ ಮಾಡಿದ ಅನುಭವ ಹಂಚಿಕೊಂಡ ನಟಿ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಎಂಟ್ರಿಕೊಟ್ಟ ನಟಿ ರಮ್ಯಾ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಟಾಲಿವುಡ್ ನಲ್ಲಿ ಮಿಂಚು ಹರಿಸಿರುವ ರಶ್ಮಿಕಾ ಸದ್ಯ ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿಕೊಟ್ಟಿದ್ದಾರೆ. ಬಾಲಿವುಡ್ ಗೆ ಎಂಟ್ರಿಕೊಟ್ಟಿರುವ ರಶ್ಮಿಕಾ ಮೊದಲ ಸಿನಿಮಾದಲ್ಲೇ ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಗುಡ್ ಬೈ ಸಿನಿಮಾ ಬಿಡುಗಡೆಗೆ ಇನ್ನು ಮೂರೇ ಮೂರು ದಿನ ಮಾತ್ರವೇ ಭಾಕಿ ಇದೆ. ಈ ಮಧ್ಯೆ ರಶ್ಮಿಕಾ ಅಮಿತಾಬ್ ಬಚ್ಚನ್ ಜೊತೆ ಸಿನಿಮಾ ಮಾಡಿದ ಅನುಭವವನ್ನು ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಜೊತೆಗಿರುವ ಫೋಟೋ ಹಂಚಿಕೊಂಡ ರಶ್ಮಿಕಾ, ಇದು ನಡೆಯುತ್ತಿದೆ ಎಂದು ನನಗೆ ಇನ್ನೂ ನಂಬಲಾಗುತ್ತಿಲ್ಲ. ಸರ್ ಜೊತೆ ಸಿನಿಮಾ ಮಾಡಿದ್ದೇನೆ, ಅವರೊಂದಿಗೆ ಮಾತನಾಡಿದ್ದೇನೆ, ಅವರ ಜೊತೆ ಒಂದೇ ವೇದಿಕೆ ಹಂಚಿಕೊಳ್ಳಲು ಸಾಧ್ಯವಾಯಿತು. ಅವರ ಜೊತೆ ಒಂದೇ ವಿಷಯದ ಬಗ್ಗೆ ಮಾತನಾಡಿದೆ. ಅವರೊಂದಿಗೆ ಫೋಟೋ ತೆಗೆದುಕೊಂಡೆ. ಅವರು ಉತ್ತಮ ನಟ. ಅವರು ನನ್ನ ಜೊತೆ ಯಾವಾಗಲೂ ನನ್ನ ತಂದೆಯಂತೆಯೇ ವಾದಿಸುತ್ತಿದ್ದರು. ಅವರು ನನ್ನ ದೇವರು – ನಾನು ಅವರಿಗೆ ತುಂಬಾ ಕೃತಜ್ಞಳಾಗಿದ್ದೇನೆ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ. ಅಕ್ಟೋಬರ್​ 7ರಂದು ‘ಗುಡ್​ಬೈ’ ಸಿನಿಮಾ ಬಿಡುಗಡೆ ಆಗಲಿದೆ. ಮೊದಲ ದಿನ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ಸೆಳೆಯಬೇಕು ಎಂಬ ಕಾರಣಕ್ಕೆ ಟಿಕೆಟ್​ ಬೆಲೆಯಲ್ಲಿ ಕಡಿಮೆ ಮಾಡಲು ಚಿತ್ರತಂಡ ಮುಂದಾಗಿದೆ. ಗುಡ್ ಬೈ ಸಿನಿಮಾದ ಟಿಕೇಟ್ ದರ 150 ರೂಪಾಯಿ ನಿಗದಿ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now