ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಟ್ರೋಲಿಗರಿಗೆ ಬಹಿರಂಗವಾಗಿ ಪತ್ರ ಬರೆದು ಅಸಮಾಧಾನ ಹೊರ ಹಾಕಿದ ರಶ್ಮಿಕಾ
‘ನಿಮ್ಮೆಲ್ಲರನ್ನು ರಂಜಿಸಲು ನಾನು ಸತತ ಶ್ರಮಪಡುತ್ತಿದ್ದೇನೆ. ಆ ಕೆಲಸದ ಬಗ್ಗೆ ನಾನು ಹೆಚ್ಚು ಯೋಚಿಸುತ್ತೇನೆ. ನಾನು ಮತ್ತು ನೀವು ಇಬ್ಬರೂ ಹೆಮ್ಮೆ ಪಡುವಂತಹ ಕೆಲಸ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ’ ಎಂದು ರಶ್ಮಿಕಾ ಅವರು ತಮ್ಮ ಬೇಸರ ತೋಡಿಕೊಂಡಿದ್ದಾರೆ.
‘ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್ನೆಟ್ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ರಶ್ಮಿಕಾ ಪ್ರಶ್ನಿಸಿದ್ದಾರೆ.
ಈವರೆಗೂ ನಾನು ಯಾರನ್ನೂ ದ್ವೇಷಿಸಿಲ್ಲ. ನನ್ನೊಂದಿಗೆ ಕೆಲಸ ಮಾಡಿದವರ ಜೊತೆ ಗೌರವದಿಂದ ಇದ್ದೇನೆ. ಎಲ್ಲರನ್ನೂ ನಾನು ಮೆಚ್ಚಿಕೊಂಡಿದ್ದೇನೆ. ನನ್ನ ಬಗ್ಗೆ ನೆಗೆಟಿವ್ ಕಾಮೆಂಟ್ ಹರಡುತ್ತಲೇ ಇದ್ದರು. ಅದರಿಂದ ಯಾರಿಗೂ ಸಂತೋಷ ಸಿಗುವುದಿಲ್ಲ. ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
