• December 21, 2025

ರಶ್ಮಿಕಾ ಮಂದಣ್ಣ ಟ್ರೋಲ್: ಕಿರಿಕ್ ಬೆಡಗಿಗೆ ಸಾಥ್ ನೀಡಿದ ಸ್ಯಾಂಡಲ್ ವುಡ್ ಕ್ವೀನ್

ಸ್ಯಾಂಡಲ್ ವುಡ್ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಆರಂಭದಿಂದಲೂ ನಟಿ ರಶ್ಮಿಕಾ ಮಂದಣ್ಣ ಟ್ರೋಲ್ ಗೆ ಒಳಗಾಗುತ್ತಿದ್ದಾರೆ. ಕನ್ನಡದ ಹುಡುಗಿ ಪರಭಾಷೆಯಲ್ಲಿ ಮಿಂಚುತ್ತಿದ್ದರು ಟ್ರೋಲಿಗರು ಮಾತ್ರ ಆಕೆಯನ್ನು ಟ್ರೋಲ್ ಮಾಡುವುದು ಬಿಟ್ಟಿಲ್ಲ. ಈ ಬಗ್ಗೆ ರಶ್ಮಿಕಾ ದೀರ್ಘವಾಗಿ ಬರೆದುಕೊಂಡು ನೋವು ತೋಡಿಕೊಂಡಿದ್ದರು. ಇದೀಗ ರಶ್ಮಿಕಾಗೆ ರಮ್ಯಾ ಸಾಥ್ ನೀಡಿದ್ದಾರೆ. ಯಾರೂ ಯಾರನ್ನೂ ಜಡ್ಜ್ ಮಾಡಬಾರದು. ಅವರ ಜೀವನ ಅವರಿಗೆ ಮಾತ್ರ ಗೊತ್ತಿರುತ್ತದೆ. ಟ್ರೋಲಿಂಗ್ ನಿಲ್ಲದ ಸಂಗತಿಯಾದರೂ, ಬೇರೆಯವರನ್ನು ನೀವು ಜಡ್ಜ್ ಮಾಡುವುದರಲ್ಲಿ ಅರ್ಥವಿಲ್ಲ. ಹಾಗಾಗಿ ಅವರ ಪಾಡಿಗೆ ಅವರನ್ನು ಬದುಕುವುದಕ್ಕೆ ಬಿಡಿ ಎಂದು ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ರಶ್ಮಿಕಾ ಪರವಾಗಿ ರಮ್ಯಾ ನಿಂತಿದ್ದಾರೆ. ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದಿನದಿಂದಲೂ ರಶ್ಮಿಕಾ ಕುರಿತು ಸಾಕಷ್ಟು ಮಂದಿ ನೆಗೆಟಿವ್ ಕಾಮೆಂಟ್ ಮಾಡಿದ್ದರು. ಆದರೆ ಯಾವುದಕ್ಕೂ ಪ್ರತಿಕ್ರಿಯಿಸಲು ಹೋಗದ ರಶ್ಮಿಕಾ ಸೈಲೆಂಟ್ ಆಗಿಯೇ ಇದ್ದು ಬಿಟ್ಟಿದ್ದರು, ಆದರೆ ಇದೇ ಮೊದಲ ಭಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪತ್ರವೊಂದನ್ನು ಬರೆದು ನೋವು ತೋಡಿಕೊಂಡಿದ್ದರು. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ ಆರಂಭಿಸಿದ್ದಾರೆ. ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್​ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್​ ಬ್ಯಾಗ್​ ರೀತಿ ಆಗಿದ್ದೇನೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ಹಾಗಿದೆ. ಎಲ್ಲರೂ ನನ್ನನ್ನು ಪ್ರೀತಿಸಲೇಬೇಕು ಅಂತೇನಿಲ್ಲ. ನನ್ನ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಮಾತ್ರಕ್ಕೆ ನೀವು ನೆಗೆಟಿವಿಟಿ ಹಬ್ಬಿಸಬಹುದು ಅಂತ ಅರ್ಥವಲ್ಲ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.  ‘ನಿಮ್ಮೆಲ್ಲರನ್ನು ರಂಜಿಸಲು ನಾನು ಸತತ ಶ್ರಮಪಡುತ್ತಿದ್ದೇನೆ. ಆ ಕೆಲಸದ ಬಗ್ಗೆ ನಾನು ಹೆಚ್ಚು ಯೋಚಿಸುತ್ತೇನೆ. ನಾನು ಮತ್ತು ನೀವು ಇಬ್ಬರೂ ಹೆಮ್ಮೆ ಪಡುವಂತಹ ಕೆಲಸ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್​ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ’ ಎಂದು ರಶ್ಮಿಕಾ ಅವರು ತಮ್ಮ ಬೇಸರ ತೋಡಿಕೊಂಡಿದ್ದರು. ‘ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್​ನೆಟ್​ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ರಶ್ಮಿಕಾ ಪ್ರಶ್ನಿಸಿದ್ದಾರೆ. ಈವರೆಗೂ ನಾನು ಯಾರನ್ನೂ ದ್ವೇಷಿಸಿಲ್ಲ. ನನ್ನೊಂದಿಗೆ ಕೆಲಸ ಮಾಡಿದವರ ಜೊತೆ ಗೌರವದಿಂದ ಇದ್ದೇನೆ. ಎಲ್ಲರನ್ನೂ ನಾನು ಮೆಚ್ಚಿಕೊಂಡಿದ್ದೇನೆ. ನನ್ನ ಬಗ್ಗೆ ನೆಗೆಟಿವ್ ಕಾಮೆಂಟ್ ಹರಡುತ್ತಲೇ ಇದ್ದರು. ಅದರಿಂದ ಯಾರಿಗೂ ಸಂತೋಷ ಸಿಗುವುದಿಲ್ಲ. ನಾನೂ ಸಾಕಷ್ಟು ನೊಂದುಕೊಂಡಿದ್ದೇನೆ ಎಂದು ಅವರು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now