• December 22, 2025

Hand with pen over application form

PSI ಹುದ್ದೆಗೆ ಮರು ಪರೀಕ್ಷೆ ದಿನಾಂಕ, ಪರೀಕ್ಷೆಗೆ ಹಾಜರಾಗಲು ಮಾರ್ಗಸೂಚಿಗಳು ಪ್ರಕಟ

ಬೆಂಗಳೂರು : ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ನೇಮಕಾತಿ ಮರು ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದ್ದು, ಜನವರಿ 23ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಕೇಂದ್ರದಲ್ಲಿ ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನ ಪ್ರಾಧಿಕಾರ ಹೊರಡಿಸಿದ್ದು, ಅವುಗಳ ಕಟ್ಟುನಿಟ್ಟು ಪಾಲನೆಗೆ ಸೂಚಿಸಿದೆ.
ಅದ್ರಂತೆ, ಪರೀಕ್ಷೆ ಸಂಬಂಧಿಸಿದ ವೇಳಾಪಟ್ಟಿ ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ನಿಯಮಗಳು ಈ ಕೆಳಗಿನಂತಿವೆ. • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ. • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು. • ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ. • ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು. • ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ. ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ. • ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. • ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ. ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು,ಅಂತ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now