ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟ, ನಿರ್ಮಾಪಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬವನ್ನು ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಆವರಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮವನ್ನು ಅಯೋಜಿಸಿದ ಅಭಿಮಾನಿಗಳಿಗೆ, ಸ್ನೇಹಿತರಿಗೆ, ತಮ್ಮ ಮಡದಿ ಪ್ರಗತಿ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿಗೆ ಅವರಿಗೆ ರಿಷಬ್ ಶೆಟ್ಟಿ ಧನ್ಯವಾದ ತಿಳಿಸಿದರು.
ರಿಷಬ್ ಶೆಟ್ಟಿ ಸ್ನೇಹಿತ ಪ್ರಮೋದ್ ಶೆಟ್ಟಿ ಮಾತನಾಡುತ್ತಾ, ಹಲವಾರು ವರ್ಷಗಳಿಂದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಜವಾಬ್ದಾರಿಯನ್ನು ರಿಷಬ್ ವಹಿಸುತ್ತಿದ್ದರು, ಆದರೆ ಯಾರಿಗೂ ಬಹಿರಂಗ ಪಡಿಸಿರಲಿಲ್ಲ’ ಎಂದು ರಿಷಬ್ ಶೆಟ್ಟಿ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ವಿವರಣೆ ನೀಡಿದರು.
ಯಾವುದೇ ಉಡಗೊರೆಯನ್ನ ಇಷ್ಟ ಪಡದ ತಮ್ಮ ಗಂಡನಿಗೆ, ಹುಟ್ಟುಹಬ್ಬದ ಉಡುಗೊರೆಯಾಗಿ ‘ರಿಷಬ್ ಶೆಟ್ಟಿ ಫೌಂಡೇಶನ್’ ಎಂಬ ಶಿಕ್ಷಣ ಕ್ಷೇತ್ರಕ್ಕೆ ಸಹಾಯ ನೀಡುವ ಸಂಸ್ಥೆಯನ್ನು ರಿಷಬ್ ಅವರ ಹುಟ್ಟುಹಬ್ಬದ ದಿನದಿಂದಲೇ ಆರಂಭಿಸುವುದಾಗಿ ಪ್ರಗತಿ ರಿಷಬ್ ಶೆಟ್ಟಿ ತಿಳಿಸಿದರು.
ಕರ್ನಾಟಕವಲ್ಲದೆ ಬೇರೆ ರಾಜ್ಯಗಳಿಂದಲೂ ರಿಷಬ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮಳೆಯನ್ನ ಲೆಕ್ಕಿಸದೆ ಆಗಮಿಸಿದ್ದರು.
ಎಲ್ಲಾ ನಟರ ಅಭಿಮಾನಿಗಳು ರಿಷಬ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು.
ಹುಲಿ ವೇಷ ಮತ್ತು ಚಂಡೆ ಕಾರ್ಯಕ್ರಮ ಸಮಾರಂಭದ ಮೆರಗನ್ನು ಮತ್ತಷ್ಟು ಹೆಚ್ಚಿಸಿತು.
