• December 22, 2025

ಮುಂಬೈನ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ

ಕಾಂತಾರ ಚಿತ್ರದ ಬಳಿಕ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೇ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬಂದಿರುವ ರಿಷಬ್ ಶೆಟ್ಟಿ ಇದೀಗ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕನ್ನಡದಲ್ಲಿ ಬಿಡುಗಡೆ ಆದ ಕಾಂತಾರ ಬಳಿಕ ಉಳಿದ ಭಾಷೆಗಳಿಗೂ ಡಬ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಾಂತಾರ ದೇಶ-ವಿದೇಶಗಳನ್ನು ತೆರೆಕಂಡಿದ್ದು, ರಿಷಬ್ ವಿದೇಶಗಳಲ್ಲೂ ಪ್ರಚಾರ ಕೈಗೊಂಡಿದ್ದಾರೆ. ಹಲವು ಕಡೆಗಳಿಗೆ ಭೇಟಿ ನೀಡಿ ಸಕ್ಸಸ್ ಮೀಟ್ ಮಾಡುತ್ತಿದ್ದಾರೆ. ಪ್ರೈವೇಟ್ ಜೆಟ್ ಮೂಲಕ ಅವರು ಎಲ್ಲಾ ಕಡೆಗಳಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗ್ತಿದೆ. ಅವರ ಫೋಟೋಗಳು ವೈರಲ್ ಆಗಿವೆ. ಸದ್ಯ ರಿಷಬ್ ಶೆಟ್ಟಿ ಮುಂಬೈನಲ್ಲಿ ಬೀಡು ಬಿಟ್ಟಿದ್ದು, ಅಲ್ಲಿನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಮಾನಿಗಳು ರಿಷಬ್ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿ ಬಿದ್ದಿದ್ದಾರೆ. ‘ಕಾಂತಾರ’ ಸಿನಿಮಾ 300 ಕೋಟಿ ಗಳಿಕೆಯತ್ತ ಮುಖ ಮಾಡುವ ಮೂಲಕ ಕನ್ನಡದ್ದೇ ಮತ್ತೊಂದು ಸಿನಿಮಾ ‘ಕೆಜಿಎಫ್‌ 2’ ಚಿತ್ರದ ದಾಖಲೆಯನ್ನು ಮುರಿಯಲು ಸಜ್ಜಾಗಿದೆ. ಈಗಾಗಲೇ ಕರ್ನಾಟಕ, ಹೊರ ರಾಜ್ಯಗಳು ಹಾಗೂ ವಿದೇಶಗಳು ಸೇರಿದಂತೆ ವಿಶ್ವಾದ್ಯಂತ ಒಟ್ಟಾರೆ 250 ಕೋಟಿ ಗಳಿಕೆ ಮಾಡಿದ್ದು, ಈ ಪೈಕಿ ಕರ್ನಾಟಕ ಹಾಗೂ ಹೊರ ರಾಜ್ಯಗಳಲ್ಲಿ 200 ಕೋಟಿ ಗಳಿಸಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now