ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಟಿ ಸಮಂತಾಗೆ ಅನಾರೋಗ್ಯ, ಚಿಕಿತ್ಸೆಗಾಗಿ ವಿದೇಶಕ್ಕೆ ಪ್ರಯಾಣ: ಅಷ್ಟಕ್ಕೂ ಸಮಂತಾಗೆ ಆಗಿದ್ದೇನು ಗೊತ್ತಾ?
ಸಭೆ, ಸಮಾರಂಭದಿಂದ ದೂರವಿರಲು ಸಮಂತಾಗೆ ವೈದ್ಯರು ಸೂಚನೆ ನೀಡಿದ್ದಾರಂತೆ. ಇದೇ ಕಾರಣಕ್ಕೆ ಸಮಂತಾ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಮೂಲಗಳ ಪ್ರಕಾರ ಸಮಂತ ಸ್ಯಾಮ್ ಚರ್ಮ ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ಮೇಕಪ್ ಮಾಡಿಕೊಳ್ಳುವ ಹಾಗಿಲ್ಲ. ಇದೇ ಕಾರಣಕ್ಕೆ ಸಮಂತಾ ಎಲ್ಲಿಯೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ, ಫೋಟೋಶೂಟ್ ಮಾಡಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ. ಅನಾರೋಗ್ಯದ ಕಾರಣ ಸಿನಿಮಾ ಕೆಲಸವನ್ನು ನಿಲ್ಲಿಸಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿ ಯುಟ್ಯೂಬ್ ಗಳ ಮೇಲೆ ಸಮಂತ ಗರಂ ಆಗಿದ್ದರು. ಇದೀಗ ಸಮಂತಾ ಆರೋಗ್ಯದ ಕುರಿತು ಸುದ್ದಿ ಹರಿದಾಡುತ್ತಿದ್ದು ಅಭಿಮಾನಿಗಳು ಕಂಗಾಲಾಗಿದ್ದಾರೆ. ಅಲ್ಲದೆ ಆರೋಗ್ಯದ ಕುರಿತು ಅಪ್ ಡೇಟ್ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
