ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಜ್ ಬಿ ಶೆಟ್ಟಿ ಸಿನಿಮಾದ ಮೂಲಕ ಮೋಹಕ ತಾರೆ ರಮ್ಯಾ ಕಂಬ್ಯಾಕ್
ರಮ್ಯಾ ಸಿನಿಮಾಗಳಿಂದ ದೂರವಾಗಿದ್ರೂ ಸಿನಿಮಾ ರಂಗದವರ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಆಗಾಗ ಶೂಟಿಂಗ್ ಸ್ಪಾಟ್ ಗೆ ಭೇಟಿ ನೀಡುತ್ತಿರುತ್ತಾರೆ. ಜೊತೆಗೆ ಉತ್ತಮ ಸಿನಿಮಾಗಳು ಬಂದಾಗ ಸೋಷಿಯಲ್ ಮೀಡಿಯಾದಲ್ಲಿ ಪ್ರಶಂಸೆ ವ್ಯಕ್ತಪಡಿಸ್ತಾರೆ. ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ಬರ್ಬೇಕು ಅನ್ನೋದು ಅವರ ಅಭಿಮಾನಿಗಳ ಆಶಯವಾಗಿದ್ದು ಇದು ಸದ್ಯದಲ್ಲೇ ಈಡೇರುವ ಎಲ್ಲಾ ಲಕ್ಷಣಗಳು ಕಾಣ್ತಿವೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶನದ ಸಿನಿಮಾದಲ್ಲಿ ರಮ್ಯಾ ನಟಿಸ್ತಾರೆ ಅನ್ನೋ ಸುದ್ದಿ ಕೇಳಿ ಬರ್ತಿದೆ.
ಇತ್ತೀಚೆಗಷ್ಟೇ ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಭೇಟಿಯಾಗಿದ್ದಾರೆ. ಈ ವೇಳೆ ಕಥೆ ಕೇಳಿರುವ ರಮ್ಯಾ, ರಾಜ್ ಬಿ ಶೆಟ್ಟಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಚಿತ್ರವನ್ನ ರಮ್ಯಾ ಅವರೇ ನಿರ್ಮಾಣ ಮಾಡಲಿದ್ದಾರಂತೆ. ಸದ್ಯ ಈ ಸುದ್ದಿ ಗಾಂಧಿನಗರದಲ್ಲಿ ಕೇಳಿ ಬರ್ತಿದ್ದು ಈ ಬಗ್ಗೆ ಸ್ವತಃ ರಮ್ಯಾ ಅಥವಾ ರಾಜ್ ಬಿ ಶೆಟ್ಟಿ ಅಧಿಕೃತ ಮಾಹಿತಿ ನೀಡಬೇಕಿದೆ.
