• March 14, 2026

ಸ್ಯಾಂಡಲ್ ವುಡ್ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now