• December 22, 2025

ವಿಚ್ಚೇದನಕ್ಕೆ ಮುಂದಾದ ಸಾನಿಯಾ, ಶೋಯೆಬ್: ಅನುಮಾನ ಹುಟ್ಟುಹಾಕಿದ ಮೂಗುತಿ ಸುಂದರಿಯ ಪೋಸ್ಟ್

ನವದೆಹಲಿ: ಭಾರತದ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಹಾಗೂ ಪಾಕಿಸ್ತಾನದ ಕ್ರಿಕೆಟಿಗ ಶೋಯೆಬ್ ಮಲಿಕ್ ಸಾಕಷ್ಟು ವರ್ಷಗಳೆ ಕಳೆದಿದೆ. ಈ ಜೋಡಿಗೆ ಒಬ್ಬ ಮಗನಿದ್ದು ಇದೀಗ ಸಾನಿಯಾ ಹಾಗೂ ಶೋಯೆಬ್ ದೂರವಾಗುತ್ತಿರುವ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ. ಸಾನಿಯಾ ಮಿರ್ಜಾ ಇತ್ತೀಚೆಗೆ ಹಂಚಿಕೊಂಡ ಪೋಸ್ಟ್ ಒಂದು ಅವರಿಬ್ಬರ ಮಧ್ಯೆ ಎಲ್ಲವೂ ಸರಿಯಾಗಿಲ್ಲವ ಎಂಬ ಅನುಮಾನ ಹುಟ್ಟುಹಾಕುವಂತೆ ಮಾಡಿದೆ. 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಾನಿಯಾ ಹಾಗೂ ಶೋಯೆಬ್ ಆ ವೇಳೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರು. ಸಾನಿಯಾ ಭಾರತೀಯಳಾಗಿದ್ದು, ಶೋಯೇಬ್ ಪಾಕಿಸ್ತಾನಿ ಎಂಬ ಕಾರಣಕ್ಕೆ ಸಾಕಷ್ಟು ವಿವಾದವೂ ಉಂಟಾಗಿತ್ತು. ಆದರೆ ಅದ್ಯಾವುದಕ್ಕೂ ಕ್ಯಾರೆ ಎನ್ನದ ಜೋಡಿ ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿ ನೆಮ್ಮದಿಯಾಗಿದ್ದರು. ಆದರೆ ಇದೀಗ 12 ವರ್ಷಗಳ ದಾಂಪತ್ಯ ಜೀವನದ ಬಳಿಕ ಇದೀಗ ಅವರಿಬ್ಬರ ನಡುವೆ ಬಿರುಕು ಎದ್ದಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾನಿಯಾ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಒಗಟಿನ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ‘ಒಡೆದ ಹೃದಯಗಳು ಎತ್ತ ಸಾಗುತ್ತಿವೆ? ಅಲ್ಲನನ್ನು ಹುಡುಕಲು’ ಎಂದು ಬರೆದಿದ್ದಾರೆ. ಇದು ಇವರಿಬ್ಬರ ಮಧ್ಯೆ ಎಲ್ಲವೂ ಸರಿ ಇಲ್ಲವಾ? ಸಾನಿಯಾ ಹಾಗೂ ಶೋಯೆಬ್  ವಿಚ್ಚೇದನ ಪಡೆದುಕೊಳ್ಳುತ್ತಿದ್ದಾರ ಎಂಬ ಪ್ರಶ್ನೆ ಹುಟ್ಟಿಕೊಳ್ಳುವಂತೆ ಮಾಡಿದೆ. ಸಾನಿಯಾ ಹಾಗೂ ಶೋಯೆಬ್ ಬೇರ್ಪಡುತ್ತಿರುವ ಬಗ್ಗೆ ಪಾಕಿಸ್ತಾನದಲ್ಲೂ ವದಂತಿಗಳು ಹಬ್ಬಿವೆ. ಆದರೆ ಈ ಬಗ್ಗೆ ದಂಪತಿ ಸಾರ್ವಜನಿಕವಾಗಿ ಎಲ್ಲಿಯೂ ಮಾತನಾಡಿಲ್ಲ. ಒಂದು ವೇಳೆ ದಂಪತಿ ನಿಜವಾಗಿಯೂ ಬೇರ್ಪಟ್ಟರೆ ಮತ್ತೆ ಟೀಕೆಗೆ ಗುರಿಯಾಗುವ ಸಾಧ್ಯತೆಯಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now