• March 17, 2026

ಪ್ರೇಮ್, ಧ್ರುವ ಸರ್ಜಾ ಕಾಂಬಿನೇಷನ ಚಿತ್ರದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್ ಗೆ ಆಹ್ವಾನ

ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ರೆಡಿಯಾಗುತ್ತಿದ್ದು ಈಗಾಗ್ಲೆ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಚಿತ್ರದ ಟೈಟಲ್ ಟೀಸರ್ ಅನ್ನು ವಿಶೇಷವಾಗಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಟೈಟಲ್ ಟೀಸರ್ ಕಾರ್ಯಕ್ರಮ ಸಾಕಷ್ಟು ಅದ್ದೂರಿಯಾಗಿ  ನಡೆಸಲು ಸಕಲ ಸಿದ್ದತೆಗಳನ್ನು ಚಿತ್ರತಂಡ ಮಾಡಿಕೊಳ್ಳುತ್ತಿದೆ. ಇದಕ್ಕೆ ಚಿತ್ರರಂಗದ ಅನೇಕ ಗಣ್ಯರನ್ನು ಆಹ್ವಾನ ಮಾಡುತ್ತಿದೆ. ಇದೇ 20ರಂದು ಚಿತ್ರದ ಟೈಟಲ್ ಅನಾವಣಗೊಳ್ಳಲಿದೆ. ಈಗಾಗ್ಲೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ರನ್ನು ಭೇಟಿ ಮಾಡಿರುವ ಪ್ರೇಮ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಇದೀಗ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ರಿಗೂ ಆಹ್ವಾನ ನೀಡಿದ್ದಾರೆ. ಸಂಜಯ್ ದತ್ ರನ್ನು ಪ್ರೇಮ್ ಭೇಟಿ ಮಾಡಿದ್ದು ಭೇಟಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಂದ ಹಾಗೆ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದಲ್ಲಿ ನಟ ಸಂಜಯ್ ದತ್ ಕೂಡ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗ್ಲೆ ಕೆಜಿಎಫ್2 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿರುವ ಸಂಜಯ್ ದತ್ ಇದೀಗ ಮತ್ತೆ ಧ್ರುವ ಸರ್ಜಾ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಡ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ರಂಗದವರ ಜೊತೆ ಟೈಟಲ್ ಅನಾವರಣ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರಿಗೂ ಆಹ್ವಾನ ನೀಡಲಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಭೇಟಿ ಮಾಡಿರುವ ಪ್ರೇಮ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now