• June 17, 2026

ಬಾಲಿವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್

2014ರಲ್ಲಿ ತೆರೆಕಂಡ ಚಂದ್ರಲೇಖಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ್ ಬಳಿಕ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು. ಸದ್ಯ ಶಾನ್ವಿ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿದ್ದು ಈ ಮಧ್ಯೆ ಶಾನ್ವಿ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಯಶ್ ಜೊತೆ ಮಾಸ್ಟರ್ ಪೀಸ್ ಸಿನಿಮಾದಲ್ಲಿ ನಟಿಸಿ ಮೋಡಿ ಮಾಡಿದ್ದ ಶಾನ್ವಿ ಇದೀಗ ಹಿಂದಿ ಆಲ್ಬಂ ಸಾಂಗ್ ಮೂಲಕ ಬಿಟೌನ್ ಗೆ ಲಗ್ಗೆ ಇಟ್ಟಿದ್ದಾರೆ. ಈಗಾಗ್ಲೆ ಕನ್ನಡ, ತೆಲುಗು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಮಿಂಚಿರುವ ಶಾನ್ವಿ ಇದೀಗ ಹಿಂದಿ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದ್ದಾರೆ. ಬಿಟೌನ್ ಸ್ಟಾರ್ ಸಿಂಗರ್ ಜುಬಿನ್ ನಾತಿಯಲ್ ಜತೆ ಆಲ್ಬಂ ಸಾಂಗ್‌ನಲ್ಲಿ ಶಾನ್ವಿ ಕಾಣಿಸಿಕೊಂಡಿದ್ದಾರೆ. ಗ್ಲಾಮರಸ್ ಲುಕ್‌ನಲ್ಲಿ ಸಖತ್ ಕಲರ್‌ಫುಲ್ ಆಗಿ ಕಾಣಿಸಿಕೊಂಡಿದ್ದು ಶಾನ್ವಿ ಲುಕ್ ಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಶಾನ್ವಿ ನಟಿಸಿರುವ ಈ ಸಾಂಗ್ ಮಿಲಿಯನ್ ಗಟ್ಟಲೇ ವಿವ್ಸ್ ಪಡೆದುಕೊಂಡಿದ್ದು ಯುಟ್ಯೂಬ್ ನಲ್ಲಿ ಟ್ರೆಂಡಿಂಗ್ನಲ್ಲಿದೆ. ಆಲ್ಬಂ ಸಾಂಗ್ ಮೂಲಕ ಬಿಟೌನ್ ಗೆ ಎಂಟ್ರಿಕೊಟ್ಟಿರುವ ಶಾನ್ವಿ ಹಿಂದಿ ಸಿನಿಮಾದಲ್ಲಿ ನಟಿಸುತ್ತಾರಾ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now