• January 1, 2026

ಶಿವಮೊಗ್ಗದಲ್ಲಿ ಅಭಿಮಾನಿಗಳಿಂದ ಅಪ್ಪು ಪುಣ್ಯಸ್ಮರಣೆ: 3 ಸಾವಿರ ಜನರಿಗೆ ಬಾಡೂಟ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷವಾಗುತ್ತ ಬಂದಿದೆ. ಇದೇ ಅಕ್ಟೋಬರ್ 29ಕ್ಕೆ ಪುನೀತ್ ಮೊದಲ ವರ್ಷದ ಪುಣ್ಯ ತಿಥಿ. ಈ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಹಮ್ಮಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ಸುಮಾರು ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದಾರೆ. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀ ವೀರಕೇಸರಿ ಯುವಕರ ಸಂಘದ ವತಿಯಿಂದ ನಟ ಪುನೀತ್ ರಾಜಕುಮಾರ್ ಮೊದಲ ವರ್ಷದ ಪುಣ್ಯ ಸ್ಮರಣೆ ಆಚರಿಸಲಾಯಿತು. ವಿವಿಧ ಹೂವುಗಳಿಂದ ಅಲಂಕೃತಗೊಂಡಿದ್ದ ಮಂಟಪದಲ್ಲಿ ಪುನೀತ್ ರಾಜ್ ಕುಮಾರ್ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಮೂರು ಸಾವರ ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಮುಂದೆ ಪ್ರತಿ ವರ್ಷವೂ ಇದೇ ರೀತಿ ಅಪ್ಪು ಪುಣ್ಯ ಸ್ಮರಣೆ ಮಾಡಲು ಶ್ರೀ ವೀರಕೇಸರಿ ಯುವಕರ ನಿರ್ಧರಿಸಿದ್ದಾರೆ. ಇನ್ನೂ ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಸಾಕಷ್ಟು ಕಡೆಗಳಲ್ಲಿ ಯುವಕರು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now