ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಮಿಳಿನ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ?
ತಮಿಳು ಸ್ಟಾರ್ ನಟ ಧನುಷ್ ನಟನೆಯ ಅರುಣ್ ಮಾಥೇಶ್ವರನ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ಶಿವಣ್ಣ ಅವರನ್ನು ಸಂಪರ್ಕಿಸಿದೆಯಂತೆ. ಸತ್ಯಜ್ಯೋತಿ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಮುಹೂರ್ತ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿತ್ತು. ಚಿತ್ರದಲ್ಲಿ ಸಂದೀಪ್ ಕಿಶನ್ ಮತ್ತು ಪ್ರಿಯಾಂಕಾ ಅರುಲ್ ಮೋಹನ್ ಕಾಣಿಸಿಕೊಳ್ಳುತ್ತಿದ್ದು ಚಿತ್ರಕ್ಕಾಗಿ 1980ರ ದಶಕದ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗುತ್ತಿದೆ.
ಕ್ಯಾಪ್ಟನ್ ಮಿಲ್ಲರ್ ಸ್ವಾತಂತ್ರ್ಯ ಪೂರ್ವದ ಕಥೆಯಾಗಿದ್ದು ಚಿತ್ರದಲ್ಲಿ ನಟಿಸಲು ಶಿವಣ್ಣ ಆಲ್ ಮೋಸ್ಟ್ ಗ್ರೀನ್ ಸಿಗ್ನಲ್ ನೀಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿಯೊಂದೆ ಹೊರ ಬೀಳಬೇಕಿದೆ. ಸದ್ಯ ಶಿವರಾಜ್ ಕುಮಾರ್ ವೇದ ಸಿನಿಮಾದ ಶೂಟಿಂಗ್ ಮುಗಿಸಿದ್ದು ಡಬ್ಬಿಂಗ್ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಶಿವರಾಜ್ ಕುಮಾರ್ ಸಿನಿಮಾಗಳ ಜೊತೆಗೆ ಪ್ರೊಡಕ್ಷನ್ ಹೌಸ್ ಮಾತುಕತೆ ಕೂಡ ನಡೆಯುತ್ತಿದೆ. ಜೊತೆಗೆ ಸದ್ಯದಲ್ಲೇ ಶ್ರೀನಿ-ಸಂದೇಶ್ ನಾಗರಾಜ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ರಾಕ್ ಲೈನ್ ವೆಂಕಟೇಶ್ ಹಾಗೂ ಯೋಗರಾಜ್ ಭಟ್ ಜೊತೆಯೂ ಕೈ ಜೋಡಿಸಲಿದ್ದಾರೆ.
