ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ ರಿಲೀಸ್ ಡೇಟ್ ಫಿಕ್ಸ್
ವೇದಾ ಸಿನಿಮಾದಲ್ಲಿ ಶಿವಣ್ಣನಿಗೆ ಜೋಡಿಯಾಗಿ ನಟಿ ಗಾನವಿ ಕಾಣಿಸಿಕೊಂಡಿದ್ದಾರೆ. ಟಿ ಎನ್ ಸೀತಾರಾಮ್ ನಿರ್ದೇಶನದ ಮಗಳು ಜಾನಕಿ ಧಾರವಾಹಿ ಮೂಲಕ ಖ್ಯಾತಿ ಘಳಿಸಿದ ಗಾನವಿ ಬಳಿಕ ಕೆಲವೊಂದು ಸಿನಿಮಾದಲ್ಲೂ ನಟಿಸಿದ್ದಾರೆ. ಸದ್ಯ ಹ್ಯಾಟ್ರಿಕ್ ಹೀರೋಗೆ ಜೋಡಿಯಾಗಿ ಗಾಂಧಿನಗರದಲ್ಲಿ ಭರ್ಜರಿ ಸದ್ದು ಮಾಡೋಕೆ ರೆಡಿಯಾಗಿದ್ದಾರೆ. ಇನ್ನೂಳಿದಂತೆ ನಟ ಶ್ವೇತಾ ಚೆಂಗಪ್ಪ, ಉಮಾಶ್ರೀ, ಜಗಪ್ಪ, ರಘು ಶಿವಮೊಗ್ಗ, ವೀಣಾ ಪೊನ್ನಪ್ಪ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈಗಾಗ್ಲೆ ವೇದ ಸಿನಿಮಾದ ಪೋಸ್ಟರ್ ಹಾಗೂ ಟ್ರೈಲರ್ ನೋಡಿ ಅಭಿಮಾನಿಗಳು ಸಿನಿಮಾ ಥಿಯೇಟರ್ ಗೆ ಎಂಟ್ರಿಕೊಡೋದಕ್ಕೆ ಕಾಯ್ತಿದ್ದಾರೆ. 1960ರಲ್ಲಿ ನಡೆದ ನೈಜ ಘಟನೆಯನ್ನು ವೇದ ಸಿನಿಮಾದಲ್ಲಿ ಹೇಳಲಾಗಿದ್ದು ಶಿವಣ್ಣ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
