• March 15, 2026

ಅದ್ದೂರಿಯಾಗಿ ನೆರವೇರಿತು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದ ಮುಹೂರ್ತ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ, ಜೊತೆಗೆ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ನಟಿಸುತ್ತಿರುವ ಶಿವಣ್ಣ ಧನುಷ್ ನಟನೆಯ ಸಿನಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಶಿವರಾಜ್ ಕುಮಾರ್ ನಟನೆಯ ಮತ್ತೊಂದು ಹೊಸ ಸಿನಿಮಾ ಸೆಟ್ಟೇರಿದೆ. ಸಂದೇಶ್ ನಾಗರಾಜ್ ಪ್ರೊಡಕ್ಷನ್ ಹೌಸ್ ನಲ್ಲಿ ಶ್ರೀನಿ ನಿರ್ದೇಶನದ ಘೋಸ್ಟ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಣಿಸಿಕೊಳ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿದೆ. ಚಿತ್ರದ ಮೊದಲ ದೃಶ್ಯಕ್ಕೆ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕ್ಲಾಪ್ ಮಾಡಿದ್ರೆ , ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದ್ದಾರೆ. ಘೋಸ್ಟ್ ಸಿನಿಮಾಗಾಗಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ. ಮಿನರ್ವ ಮಿಲ್ ನಲ್ಲಿ ಸುಮಾರು 24 ದಿನಗಳ ಕಾಲ ಶೂಟಿಂಗ್ ನಡೆಯಲಿದ್ದು ಜೈಲ್ ಸೆಟ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಮಿನರ್ವ ಮಿಲ್  ನಲ್ಲಿ 15 ವಿಭಿನ್ನ ಸೆಟ್, ಮೈಸೂರಿನಲ್ಲಿ 4 ತರಹದ ಸೆಟ್ ಗಳನ್ನು ಕಲಾ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಈಗಾಗ್ಲೆ ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್ ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಶ್ರೀನಿಗೆ ಇದು ಐದನೇ ಸಿನಿಮಾ. ಈ ಚಿತ್ರದ ನಿರ್ದೇಶನದ ಜೊತೆಗೆ ಕಥೆ ಚಿತ್ರಕಥೆಯನ್ನು ಬರೆದಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now