ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಿರೀಟಿ ಸಿನಿಮಾ ಸೆಟ್ ಗೆ ಸಪ್ರೈಸ್ ವಿಸಿಟ್ ಮಾಡಿದ ಹ್ಯಾಟ್ರಿಕ್ ಹೀರೋ
ಕಿಕೀಟಿ ನಟನೆಯ ಚೊಚ್ಚಲ ಸಿನಿಮಾದ ಶೂಟಿಂಗ್ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನಡೆಯುತ್ತಿದೆ. ಈ ವೇಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಿನಿಮಾ ಸೆಟ್ ಗೆ ಭೇಟಿ ನೀಡಿದ್ದು ಸಾಕಷ್ಟು ಸಮಯ ಕಳೆದಿದ್ದಾರೆ. ಶಿವಣ್ಣ ಸೆಟ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾರ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಚಿತ್ರತಂಡದೊಂದಿಗೆ ಕೆಲ ಸಮಯ ಕಳೆದ ಶಿವಣ್ಣ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಅಂದ ಹಾಗೆ ಶಿವರಾಜ್ ಕುಮಾರ್ ಹಾಗೂ ಜೆನಿಲಿಯಾ ಸತ್ಯ ಇನ್ ಲವ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು.
ಇದೇ ತಿಂಗಳು 29ರಂದು ಕಿರೀಟಿ ಹುಟ್ಟುಹಬ್ಬವಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟೈಟಲ್ ಅನಾವರಣವಾಗಲಿದೆ. ಅಂದು ವಿಡಿಯೋ ಝಲಕ್ ಮೂಲಕ ಚಿತ್ರದ ಶೀರ್ಘಿಕೆ ಘೋಷಿಸಲು ಚಿತ್ರತಂಡ ಮುಂದಾಗಿದೆ.
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ವಾರಾಹಿ ಚಲನ ಚಿತ್ರಂ’ ಮೂಲಕ ಅದ್ದೂರಿ ಬಜೆಟ್ನಲ್ಲಿ ಮೂಡಿಬರುತ್ತಿರುವ ಸಿನಿಮಾವನ್ನು ‘ಮಯಾಬಜಾರ್’ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಅವರ ‘ಪುಷ್ಪ’ ಸಿನಿಮಾ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಕಿರೀಟಿಯ ಈ ಚೊಚ್ಚಲ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
