ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಶುಭಮಂಗಳ’ ಸಿನಿಮಾದ ಟ್ರೇಲರ್ ಬಿಡುಗಡೆ: ಅಕ್ಟೋಬರ್ 14ಕ್ಕೆ ಚಿತ್ರ ತೆರೆಗೆ
ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದು, ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ರೂಪಿಸಿದ್ದಾರೆ. ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಮುಂತಾದವರು ನಟಿಸಿದ್ದು, ಜೂಡಾ ಸ್ಯಾಂಡಿ ಸಂಗೀತ, ರಾಕೇಶ್ ಬಿ ರಾಜ್ ಕ್ಯಾಮೆರಾ, ಸಂತೋಷ್ ನಿರ್ದೇಶನದ ಜೊತೆಗೆ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಅವ್ಯಕ್ತ ಫಿಲ್ಮಂಸ್ ನಡಿ ಸಂತೋಷ್ ಸ್ನೇಹಿತರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮದುವೆ ಮನೆಗೆ ತೆರಳಿ ವಿಭಿನ್ನವಾಗಿ ಪ್ರಮೋಷನ್ ನಡೆಸ್ತಿರುವ ಚಿತ್ರತಂಡ ಬರುವ ಅಕ್ಟೋಬರ್ 14ಕ್ಕೆ ಚಿತ್ರವನ್ನು ತೆರೆಗೆ ತರಲಿದೆ.
