• January 1, 2026

ನಟ ಝೈದ್ ಖಾನ್ ಜೊತೆ ಬನಾರಸ್ ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್‌ ಮಾಂಟೇರೋ ಅಭಿನಯದ ಬನಾರಸ್ ಚಿತ್ರ ವೀಕ್ಷಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದೇನೆ. ನೈಜತೆಯಿಂದ ಕೂಡಿದ ಪಾತ್ರಗಳು, ಸ್ವಾರಸ್ಯಕರವಾದ ಕತೆಯನ್ನು ಒಳಗೊಂಡಿರುವ ಸದಭಿರುಚಿಯ ಚಲನಚಿತ್ರವಿದು. ಇಂತಹ ಚಿತ್ರಗಳ ಸಂಖ್ಯೆ ನೂರಾಗಲಿ, ಚಿತ್ರರಂಗ ಬೆಳೆಯಲಿ, ಚಿತ್ರತಂಡ ಬೆಳೆಯಲಿ. ಎಲ್ಲರಿಗೂ ಒಳಿತಾಗಲಿ ಎಂದು ಶುಭ ಹಾರೈಸಿದ್ದಾರೆ. ಜಯತೀರ್ಥ ನಿರ್ದೇಶನದ ಬನಾರಸ್ ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 4ರಂದು ದೇಶಾದ್ಯಂತ ಬನಾರಸ್ ಬಿಡುಗಡೆಯಾಗಿದೆ. ಕನ್ನಡದಲ್ಲಿ 180ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಈ ಚಿತ್ರ ಬಿಡುಗಡೆ ಆಗಿದ್ದರೆ, ಹಿಂದಿಯಲ್ಲಿ 500 ತಮಿಳು ಮತ್ತು ತೆಲುಗಿನಲ್ಲಿ ತಲಾ 150 ಹಾಗೂ ಮಲಯಾಳಂನಲ್ಲೂ 50ಕ್ಕೂ ಅಧಿಕ ಚಿತ್ರಮಂದಿರಗಳು ಬನಾರಸ್ ತೆರೆ ಕಂಡಿತ್ತು. ಝೈದ್ ಹಾಗೂ ಸೋನಲ್ ಜೊತೆ ಸುಜಯ್ ಶಾಸ್ತ್ರಿ,  ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಕಾಣಿಸಿಕೊಂಡಿದ್ದಾರೆ. ಮೊದಲ ಚಿತ್ರದಲ್ಲೇ ಝೈದ್ ಖಾನ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now