• March 14, 2026

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ: ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿ ಬಂದಿತ್ತಾ ಹಾಡಿಗೆ ಸುಬ್ಬಣ್ಣ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಈ ಮೂಲಕ ಹಿನ್ನೆಲೆ ಗಾಯನದಲ್ಲಿ ಕನ್ನಡಕ್ಕೆ ಒಲಿದ ಮೊಟ್ಟ ಮೊದಲ ರಾಷ್ಟ್ರ ಪ್ರಶಸ್ತಿ ಇದಾಗಿತ್ತು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಸುಬ್ಬಣ್ಣ ಅವರು ಅವುಗಳನ್ನು ಇನ್ನಷ್ಟು ಎತ್ತರಕ್ಕೆ ಒಯ್ದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ‌ ತಿಳಿಸಿದ್ದಾರೆ. ಸುಬ್ಬಣ್ಣ ನಿಧನಕ್ಕೆ ಸಂತಾಪ ಸೂಚಿಸಿದ ಮಾಜಿ ಸಿಎಂ ಯಡಿಯೂರಪ್ಪ, ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ದೇವರು ಅವರಿಗೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now