ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೋಲ್ಕತ್ತಾ: ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ವರ, ಕೀಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋನಾ ಗಂಗೂಲಿ ಅವರನ್ನು ತಡರಾತ್ರಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕನ್ ಗುಂನ್ಯಾ ರೋಗದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಡೋನಾ ಗಂಗೂಲಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ವುಡ್‍ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಹಾಗೂ ಸಿಇಒ ಡಾ.ರೂಪಾಲಿ ಬಸು ಹೇಳಿದ್ದಾರೆ.
