ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿರ್ದೇಶಕನಾಗಿ ಭಡ್ತಿ ಪಡೆದ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್
ಸಿನಿಮಾ ನಿರ್ದೇಶನ ಮಾಡುವ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಸೃಜನ್ ಲೋಕೇಶ್, ‘ಹಿರಿಯ ನಿರ್ಮಾಪಕ ಸಂದೇಶ ನಾಗರಾಜ್ ಅವರ ಆಶೀರ್ವಾದದೊಂದಿಗೆ ಹೊಸ ಪ್ರಯತ್ನಕ್ಕೆ ಶುಭಾರಂಭ. ‘ಲೋಕೇಶ್ ಪ್ರೊಡಕ್ಷನ್ಸ್’ ಹಾಗೂ ‘ಸಂದೇಶ ಪ್ರೊಡಕ್ಷನ್ಸ್’ ಸಂಸ್ಥೆ ಅಡಿಯಲ್ಲಿ ಹೊಸ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಮತ್ತಷ್ಟು ವಿವರಗಳು ಅತಿ ಶೀಘ್ರದಲ್ಲಿ. ನಿರ್ದೇಶಕನಾಗಿ ನನ್ನ ಮೊದಲ ಪ್ರಯತ್ನ ನಿಮ್ಮ ಹಾರೈಕೆ ಸದಾ ನಮ್ಮ ಮೇಲೆ ಇರಲಿ’ ಎಂದು ಸೃಜನ್ ಬರೆದುಕೊಂಡಿದ್ದಾರೆ.
ಮೂಲಗಳ ಪ್ರಕಾರ ಈ ಚಿತ್ರಕ್ಕೆ ಸೃಜನ್ ಅವರೇ ಹೀರೋ ಎನ್ನಲಾಗುತ್ತಿದೆ. ನಿರ್ದೇಶನ, ನಿರ್ಮಾಣದ ಜೊತೆಗೆ ನಟನೆಯ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಮಗನ ಮೊದಲನೇ ಸಿನಿಮಾಗೆ ಸೃಜನ್ ತಾಯಿ ಗಿರಿಜಾ ಲೋಕೇಶ್ ಸಾಥ್ ನೀಡುತ್ತಿದ್ದು, ಈ ಸಿನಿಮಾದಲ್ಲಿ ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ. ಈಗಾಗಲೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯ ಕೆಲಸವನ್ನೂ ಮುಗಿಸಿರುವ ಸೃಜನ್, ನಾಯಕಿಗಾಗಿ ಹುಡುಕಾಟದಲ್ಲಿ ತೊಡಗಿಕೊಂಡಿದ್ದಾರೆ.
