• December 21, 2025

ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಶಾಕ್‌ ಎದುರಾಗಿದೆ. ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌  ಅವರು ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿ  ಶಾಸಕ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್‌ ಪರ ಮತ ಚಲಾಯಿಸಿದ್ದಾರೆ. ಹೀಗಾಗಿ ಎಸ್‌ಟಿಎಸ್‌ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ. ಮತ ಚಲಾಯಿಸುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಎಸ್‌.ಟಿ.ಸೋಮಶೇಖರ್‌ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು. ಎಸ್‌.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸೋಮಶೇಖರ್ ಮನೆ ಮುತ್ತಿಗೆಗೆ ಬಿಜೆಪಿ ಯುವ ಮೋರ್ಚಾ ಮುಂದಾಗಿದೆ. ಮಧ್ಯಾಹ್ನ 12:30ಕ್ಕೆ ಪ್ರತಿಭಟನೆ ನಡೆಸಲು ಕಾರ್ಯಕರ್ತರು ಮುಂದಾಗಿದ್ದಾರೆ.
 

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now