ಭಾರತದ ಆರಂಭಿಕ ಬ್ಯಾಟ್ಸ್‌ಮನ್ ಮತ್ತು ಉಪ ನಾಯಕ ಕೆಎಲ್ ರಾಹುಲ್ ಅವರು ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆ ಒಳಗಾಗಿದ್ದರು ಮತ್ತು ಯಶಸ್ವಿಯಾಗಿದೆ. ತೊಡೆಸಂದು ಗಾಯದಿಂದ ಬಳಲುತ್ತಿರುವ ನಂತರ ಚೇತರಿಕೆಯ ಹಾದಿಯಲ್ಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ನಡೆದ ಭಾರತದ ಟಿ20 ಸರಣಿಯಿಂದ ಮತ್ತು ನಂತರ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ಶಸ್ತ್ರಚಿಕಿತ್ಸೆಯ ನಂತರ ತಮ್ಮ ಆರೋಗ್ಯದ ನಗ್ಗೆ ಮಾಹಿತಿ ತಿಳಿಸಿರುವ ಕೆಎಲ್ ರಾಹುಲ್, ಟ್ವಿಟ್ಟರ್‌ನಲ್ಲಿ ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಎಂದು ಹೇಳಿದ್ದಾರೆ.
“ಎಲ್ಲರಿಗೂ ನಮಸ್ಕಾರ. ಇದು ಒಂದೆರಡು ವಾರಗಳ ಕಠಿಣ ಸಮಯವಾಗಿದ್ದು, ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನನ್ನ ಆರೋಗ್ಯದ ಬಗ್ಗೆ ನಿಮ್ಮ ಸಂದೇಶಗಳಿಗೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇನೆ,” ಎಂದು ಕೆಎಲ್ ರಾಹುಲ್ ಟ್ವಿಟರ್‌ನಲ್ಲಿ ಬರೆದಿದ್ದಾರೆ.