ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ
‘ಕನ್ನಡದಲ್ಲಿ ಇಂಥದ್ದೊಂದು ಸಿನಿಮಾ ಬಂದಿರುವುದು ನೋಡಿ ಗರ್ವ ಬಂತು. ಅವರ ಈ ಪ್ರಯತ್ನಕ್ಕೆ ಫುಲ್ ಮಾರ್ಕ್ಸ್ ಕೊಡುತ್ತೇನೆ’. ಈ ಗಂಧದ ಗುಡಿಯಲ್ಲಿ ಯುವಕರು ನೋಡಿ ತಿಳಿದುಕೊಳ್ಳಬಹುದಾದ ಸಾಕಷ್ಟು ವಿಷಯಗಳು ಇವೆ. ಅದರಲ್ಲೂ ನನ್ನ ಉತ್ತರ ಕರ್ನಾಟಕದ ಬಗ್ಗೆ ತೋರಿಸಿದಾಗ ಮತ್ತು ಪುನೀತ್ ಅವರು ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ನಾನೂ ಭಾವುಕಳಾದೆ. ನಮ್ಮ ನೆಲದ ಚಿತ್ರ ಇದಾಗಿದ್ದರಿಂದ ಹೆಚ್ಚು ಆಪ್ತತೆ ಅನಿಸಿತು ಎಂದು ಸುಧಾಮೂರ್ತಿ ಹೇಳಿದ್ದಾರೆ.
ಇನ್ನೂ ಗಂಧದ ಗುಡಿ ಚಿತ್ರ ಎಲ್ಲೆಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆ 10 ಗಂಟೆಯಿಂದಲೇ ಮಲ್ಟಿಫ್ಲೆಕ್ಸ್ ಗಳಲ್ಲಿ ಶೋಗಳು ಆರಂಭವಾಗಿದೆ. ಬೆಂಗಳೂರಿಲ್ಲೇ 50ಕ್ಕೂ ಹೆಚ್ಚು ಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಮೂಲಕ ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಗಂಧದ ಗುಡಿ ದಾಖಲಿ ನಿರ್ಮಿಸುತ್ತಿದೆ.
