• January 1, 2026

ಕಾಂತಾರ ಮೆಚ್ಚಿ ರಿಷಬ್ ಶೆಟ್ಟಿಯನ್ನು ಮನೆಗೆ ಕರೆದು ಸನ್ಮಾನಿಸಿದ ರಜನಿಕಾಂತ್

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದರುವ ಕಾಂತಾರ ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾಷೆಯಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರ ಚಿತ್ರವನ್ನು ಸಾಕಷ್ಟು ಮಂದಿ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ಹಿಂದೆ ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್ ರಿಷಬ್ ಶೆಟ್ಟಿಗೆ ಕರೆ ಮಾಡಿ ವಿಶ್ ಮಾಡಿದ್ದರು. ಅಲ್ಲದೆ ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದರು ಎಂದು ರಿಷಬ್ ಶೆಟ್ಟಿ ಹೇಳಿದ್ದರು. ಅಲ್ಲದೆ ಇದೇ ವೇಳೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡೆ ಎಂದು ರಿಷಬ್ ಶೆಟ್ಟಿ ಹೇಳಿದ್ದರು. ರಜನಿಕಾಂತ್ ಕರೆ ಮಾಡಿ ಕೆಲ ದಿನಗಳಲ್ಲೇ ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಸಿ ಸನ್ಮಾನಿಸಿದ್ದಾರೆ. ಈ ವೇಳೆ ಕಾಂತಾರ ಸಿನಿಮಾ ಹಾಗೂ ಚಿತ್ರರಂಗದ ಕುರಿತು ಕೆಲ ಕಾಲ ರಿಷಬ್ ಶೆಟ್ಟಿ ಜೊತೆ ಮಾತುಕತೆ ನಡೆಸದ್ದಾರೆ. ಅಲ್ಲದೆ ರಿಷಬ್ ಶೆಟ್ಟಿಗೆ ರೇಷಿಮೆ ವಸ್ತ್ರ ಹೊದಿಸಿ ಸನ್ಮಾನಿಸಿದ್ದಾರೆ. ರಜನಿಕಾಂತ್​ ಅವರ ಕಾಲಿಗೆ ಬಿದ್ದು ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ ರಿಷಬ್​ ಶೆಟ್ಟಿ. ಈ ಫೋಟೋಗಳನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದೆ. ಇವು ಸಿಕ್ಕಾಪಟ್ಟೆ ವೈರಲ್​ ಆಗಿವೆ. ‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಕಳೆದಿದೆ. ಇಂದಿಗೂ ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಬೇರೆ ಭಾಷೆಗಳಿಗೂ ಡಬ್​ ಆಗಿ ಸೂಪರ್​ ಹಿಟ್​ ಆಗಿದೆ. ನೂರಾರು ಕೋಟಿ ರೂಪಾಯಿ ಗಳಿಕೆ ಮಾಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now