• March 14, 2026

Tags : death

ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿ ಭಾವುಕರಾದ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 9 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ಕುಟುಂಬ ಸದಸ್ಯರು ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಕ ಭೇಟಿ ನೀಡಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಳೆದ 9 ತಿಂಗಳಿನಿಂದ ಪ್ರತಿ ನಿತ್ಯವೂ ಪುನೀತ್ ಕುಟುಂಬ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸುತ್ತ ಬಂದಿದೆ. ಪುನೀತ್ ಅಗಲಿ 9 ತಿಂಗಳು ಕಳೆದಿರೋ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಧೀರನ್ ಹಾಗೂ ಕುಟುಂಬದ […]Read More

ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀ ದೇವಿ ನಿಧನ

ಕನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀ ದೇವಿ ಅವರು ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. 84 ವರ್ಷ ವಯಸ್ಸಿನ ಲಕ್ಷ್ಮಿದೇವಿ ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಕಳೆದ ವರ್ಷವಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ಸರ್ಜಾ ಕುಟುಂಬ ಇಂದು ಹಿರಿಯ […]Read More

ಸಾಹಿತ್ಯ ಲೋಕದ ಹಿರಿಯ ಚಿಂತಕ, ಸಾಹಿತಿ ಜಿ.ರಾಜಶೇಖರ್ ನಿಧನ

ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಜಿ .ರಾಜಶೇಖರ್(75) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಜಿ.ರಾಜಶೇಖರ್ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಬಿಗಡಾಯಿಸಿದ್ದ ಕಾರಣ ನಿನ್ನೆ(ಜು20) ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಜನಿಸಿದ ರಾಜಶೇಖರ್ ಕೆಲ ಕಾಲ ಶಿಕ್ಷಕರಾಗಿ ದುಡಿದು ಬಳಿಕ ಎಲ್ ಐ ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿತ್ಯ-ಸಮಾಜ, ಸಾಂಸ್ಕೃತಿಕ, ರಾಜಕಾರಣ ಹಾಗೂ ಸಮಕಾಲೀನ ವಿದ್ಯಮಾನಗಳ […]Read More

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆ ನಟ ಯಲಹಂಕ ಬಾಲಾಜಿ ಇಂದು ನಿಧನರಾಗಿದ್ದಾರೆ. ಟಿ.ಎನ್.ಸೀತಾರಾಮ್ ನಿರ್ದೇಶನದ ಸಾಕಷ್ಟು ಧಾರವಾಹಿಗಳಲ್ಲಿ ಬಾಲಾಜಿ ನಟಿಸಿದ್ದರು. ಬಾಲಾಜಿ ಅವರ ನಿಧನದ ಕುರಿತು ಟಿ.ಎನ್.ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ‘ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ, ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನಪಿಸಿಕೊಂಡರೆ ಅಪಾರ ಸಂಕಟವಾಗುತ್ತದೆ’ ಎಂದು ಟಿ.ಎನ್.ಸೀರಾತಾಮ್ ಫೇಸ್ ಬುಕ್ ನಲ್ಲಿ […]Read More

ಚೆನ್ನೈನ ಫ್ಲಾಟ್ ನಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ ಪ್ರತಾಪ್ ಪೋತೆನ್

ಬಹುಭಾಷಾ ನಟ, ನಿರ್ದೇಶಕ, ಬರಹಗಾರ ಪ್ರತಾಪ್ ಪೋತೆನ್ ಅವರ ದೇಹ ಚೆನ್ನೈನ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ. 69 ವರ್ಷ ವಯಸ್ಸಿನ ಪ್ರತಾಪ್ ಚೆನ್ನೈನ ಕಿಲ್ ಪೌಕ್ ನ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು ಇಂದು ಬೆಳಗ್ಗೆ ಅವರ ದೇಹ ಶವವಾಗಿ ಪತ್ತೆಯಾಗಿದೆ. ಮಲಯಾಳಂ ಸಿನಿಮಾ ರಂಗದ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದ ಪ್ರತಾಪ್ ಪೋತೆನ್ ಬಳಿಕ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ನಟಿಸಿ ಹೆಸರು ಮಾಡಿದ್ದರು. ಕಿಲ್ ಪೌಕ್ ಅಪಾರ್ಟ್ ಮೆಂಟ್ ನಲ್ಲಿ […]Read More

ಡಾ.ರಾಜ್ ಕುಮಾರ್, ಪೃಥ್ವಿರಾಜ್ ಕಪೂರ್, ಬಾಲಕೃಷ್ಣರಂತಹ ದಿಗ್ಗಜರಿಗೆ ಮೇಕಪ್ ಮಾಡಿದ್ದ ಕೇಶವಣ್ಣ ವಿಧಿವಶ

ಚಿತ್ರರಂಗದ ಖ್ಯಾತ ನಟರುಗಳಾದ ಡಾ. ರಾಜ್ ಕುಮಾರ್, ಪೃಥ್ವಿ ರಾಜ್ಕಪೂರ್, ರಜನಿಕಾಂತ್ , ಬಾಲಕೃಷ್ಣ, ಅಂಬರೀಶ್, ನರಸಿಂಹ ರಾಜು, ಅನಂತ್ ನಾಗ್, ರವಿಚಂದ್ರನ್,ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಸೇರಿದಂತೆ ಸಾಕಷ್ಟು ದಿಗ್ಗಜ ನಟರಿಗೆ ಮೇಕಪ್ ಮಾಡಿದ್ದ ಮೇಕಪ್ ಆರ್ಟಿಸ್ಟ್ ಎಂ. ಎಸ್ ಕೇಶವಣ್ಣ ನಿಧನರಾಗಿದ್ದಾರೆ. 85 ವರ್ಷ ವಯಸ್ಸಾಗಿದ್ದ ಕೇಶವಣ್ಣ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ […]Read More

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ತಾಯಿ ನಿಧನ

ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ, ದಿಯಾ ಖ್ಯಾತಿ ಪೃಥ್ವಿ ಅಂಬರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಇಂದು ಮುಂಜಾನೆ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುಜಾತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಮಂಗಳೂರಿನ ಸ್ವಗ್ರಾಮದಲ್ಲಿ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತಾ ಅವರು ಹಲವು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು […]Read More

Phone icon
Call Now
Reach us!
WhatsApp icon
Chat Now