• March 14, 2026

Tags : hospitalized

ಸ್ಯಾಂಡಲ್ ವುಡ್ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.Read More

ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ: ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಡೋನಾ ಗಂಗೂಲಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ, ಕೀಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೋನಾ ಗಂಗೂಲಿ ಅವರನ್ನು ತಡರಾತ್ರಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕನ್ ಗುಂನ್ಯಾ ರೋಗದಿಂದ ಬಳಲುತ್ತಿರುವುದಾಗಿ ತಿಳಿಸಿದ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಡೋನಾ ಗಂಗೂಲಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು  ವುಡ್‍ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಹಾಗೂ ಸಿಇಒ ಡಾ.ರೂಪಾಲಿ ಬಸು […]Read More

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದು ಹಲವಾರು ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೀಪಿಕಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಸೆ.26ರ ಮಧ್ಯರಾತ್ರಿ ಏಕಾಏಕಿ ದೀಪಿಕಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ನಿವಾಸದಲ್ಲಿ ಇರುವಾಗಲೇ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ. ಕಳೆದ […]Read More

ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಭೇಟಿ ನೀಡಿದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೆ ಇರುತ್ತಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಕ್ರಷ್ ಗೆ ಇದೀಗ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳುತ್ತಿರುವ ಕೊಡಗಿನ ಬೆಡಗಿನ ಹೈದಾಬಾದ್​​ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. […]Read More

ಖ್ಯಾತ ಹಾಸ್ಯ ನಟನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್‌ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ […]Read More

ಪತಿ ಮಾಡಿದ ಯಡವಟ್ಟು ಕೆಲಸದಿಂದ ಆಸ್ಪತ್ರೆಗೆ ದಾಖಲಾದ ನಯನತಾರಾ

ಲೇಡಿ ಸೂಪರ್ ಸ್ಟಾರ್ ನಯನತಾರಾ ಮದುವೆಯ ಬಳಿಕ ಮತ್ತೆ ಮತ್ತೆ ಸುದ್ದಿಯಾಗ್ತಿದ್ದಾರೆ. ಮದುವೆಯಾಗಿ ಕೆಲ ತಿಂಗಳು ಕಳೆಯುವುದರೊಳಗೆ ನಯನತಾರಾ ಆಸ್ಪತ್ರೆಗೆ ದಾಖಲಾಗಿದ್ದು ಇದಕ್ಕೆಲ್ಲಾ ಪತಿ ವಿಘ್ನೇಶ್ ಮಾಡಿದ ಯಡವಟ್ಟೇ ಕಾರಣ ಎನ್ನಲಾಗುತ್ತಿದೆ. ಹೊಸ ದಂಪತಿ ನಯನತಾರಾ ಹಾಗೂ ವಿಘ್ನೇಶ್ ಸದಾ ಒಂದಲ್ಲ ಒಂದು ವಿಷಯಕ್ಕೆ ಸುದ್ದಿಯಾಗ್ತಿದ್ದಾರೆ. ಮದುವೆಯ ಆರಂಭದಲ್ಲಿ ಕೆಲವೊಂದು ಸಮಸ್ಯೆಗಳನ್ನು ಮಾಡಿಕೊಂಡಿದ್ದ ದಂಪತಿಗಳು ಬಳಿಕ ಹೊಸ ಮನೆ ಖರೀದಿಸಿ ಸುದ್ದಿಯಾಗಿದ್ದರು. ಆದ್ರೆ ಇದೀಗ ನಯನತಾರಾ ಆಸ್ಪತ್ರೆಗೆ ದಾಖಲಾಗಿರೋದು ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಮುದ್ದಿನ ಪತ್ನಿಗಾಗಿ […]Read More

ಚಿತ್ರೀಕರಣದ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಗಂಭೀರ ಗಾಯ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಬಳಿಕ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊಂದಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಸಂಯುಕ್ತ ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹೆಸರು ಮಾಡುತ್ತಿರುವ ಸಂಯುಕ್ತ ಹೆಗ್ಡೆ ಸದ್ಯ ಕ್ರೀಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಫೈಟಿಂಗ್ ಸೀಕ್ವೇನ್ಸ್ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡುವಂತೆ ಚಿತ್ರತಂಡ ಕೇಳಿಕೊಂಡಿತ್ತು. ಆದರೆ ಅದಕ್ಕೆ ಸಂಯುಕ್ತ ಒಪ್ಪದಿದ್ದಾಗ […]Read More

ನಟ ಶ್ರೀವಿಷ್ಣು ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ತೆಲುಗು ನಟ ಶ್ರೀವಿಷ್ಣು ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರೀವಿಷ್ಣು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ನಿನ್ನೆ ರಾತ್ರಿಯಿಂದ ಮತ್ತೆ ವಿಪರೀತ ಜ್ವರ ಹೆಚ್ಚಾದ ಕಾರಣ ಶ್ರೀವಿಷ್ಣು ಅವರನ್ನು ಎಮರ್ಜೆನ್ಸಿ ವಾರ್ಡ್ ಗೆ ದಾಖಲಿಸಲಾಗಿದೆ. ಶ್ರೀವಿಷ್ಣು ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಲೇಟ್ ಲೇಟ್ಸ್ ಸಂಖ್ಯೆ ತುಂಬಾ ಕಮ್ಮಿಯಾಗಿದ್ದು, ವಿಷ್ಣು ಗಂಭೀರ ಸ್ಥಿತಿಯಲ್ಲಿದ್ದಾರೆ.ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಕ್ಕೆ ಅಪಾಯವಿಲ್ಲ ಎಂದು […]Read More

ಪವರ್ ಸ್ಟಾರ್ ಪವನ್ ಕಲ್ಯಾಣ್ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಹೈ ಫೀವರ್ ನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ  ಅಡ್ಮೀಟ್ ಮಾಡಲಾಗಿದೆ. ಪವನ್ ಕಲ್ಯಾಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನೇಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಪವನ್ ಜೊತೆಗೆ ಪಕ್ಷದ ಕೆಲವು ಪ್ರಮುಖ ನಾಯಕರು, ಕಾರ್ಯಕ್ರಮ ಸಮಿತಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಸಹ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿರುವ ಅಭಿಮಾನಿಗಳು ಪವನ್ […]Read More

Phone icon
Call Now
Reach us!
WhatsApp icon
Chat Now