• March 18, 2026

Tags : lohitashwa

ಚಿಕಿತ್ಸೆ ಫಲಕಾರಿಯಾಗದೆ ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಸ್ಯಾಂಡಲ್ ವುಡ್ ನ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲೋಹಿತಾಶ್ವ ನಟ ಶರತ್ ಲೋಹಿತಾಶ್ವ ಅವರ ತಂದೆ. ಸುಸ್ತು, ವಾಂತಿ-ಭೇದಿ, ಚಳಿ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ರಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲೋಹಿತಾಶ್ವ ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ದಾಖಲಾದ […]Read More

ಸ್ಯಾಂಡಲ್ ವುಡ್ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಲೋಹಿತಾಶ್ವ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಬೆಂಗಳೂರಿನ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲೋಹಿತಾಶ್ವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಟ ಲೋಹಿತಾಶ್ವ ಖ್ಯಾತ ಖಳ ನಟ ಶರತ್ ಲೋಹಿತಾಶ್ವ ಅವರ ತಂದೆಯಾಗಿದ್ದು ಲೋಹಿತಾಶ್ವ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ.Read More

Phone icon
Call Now
Reach us!
WhatsApp icon
Chat Now