Tags : raghavendra rajkumar
ಕೆ.ನರೇಂದ್ರಬಾಬು ಅವರ ನಿರ್ದೇಶನದ 13 ಚಿತ್ರದ ಟೀಸರ್ ರಾಜ್ಯದ 32 ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅಲ್ಲದೆ ದುಬೈ, ಸಿಂಗಪೂರ್ ಸೇರಿದಂತೆ ಅನೇಕ ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿದೆ. ನಿನ್ನೆ ನಡೆದ ಸಮಾರಂಭದಲ್ಲಿ ವಿಶೇಷವಾಗಿ ಎಲ್ಲಾ ಜಿಲ್ಲೆಗಳಿಂದ ಆಗಮಿಸಿದ್ದ ಅಪ್ಪು ಅಭಿಮಾನಿಗಳೇ ಸೇರಿ 13 ಚಿತ್ರದ ಟೀಸರ್ ರಿಲೀಸ್ ಮಾಡಿದರು. ರಾಘವೇಂದ್ರ ರಾಜ್‌ಕುಮಾರ್, ಶ್ರುತಿ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ‘13’ ಚಿತ್ರವನ್ನು ಯುವಿ ಪ್ರೊಡಕ್ಷನ್ ಅಡಿಯಲ್ಲಿ ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್, ಮಂಜುನಾಥಗೌಡ ಹಾಗೂ ಸಿ.ಕೇಶವಮೂರ್ತಿ […]Read More
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಪ್ಪು ಅವರಿಗೆ ಮರಣೊತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅಪ್ಪು ಪತ್ನಿ ಅಶ್ವಿನಿ ಸ್ವೀಕರಿಸಿದ್ದಾರೆ. ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದಕ್ಕಾಗಿ ನಟ ರಾಘವೇಂದ್ರ ರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭಕ್ಕೆ ಹೆಮ್ಮೆ ಪಡಬೇಕು. ನಮ್ಮ ತಂದೆ ಕರ್ನಾಟಕ ರತ್ನ ಪಡೆದುಕೊಳ್ಳುವಾಗ 30 ವರ್ಷದ ಹಿಂದೆ ನಮ್ಮನ್ನು ಕರೆದುಕೊಂಡು ಬಂದಿದ್ದರು. ಈಗ ನನ್ನ ತಮ್ಮ ಅಪ್ಪು ಕರೆಸಿದ್ದಾನೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಶಕ್ತಿ ಇರುತ್ತದೆ […]Read More
ನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್‌ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’ ಖ್ಯಾತಿಯ ನಟ ಮನೋಜ್‌ಕುಮಾರ್ ಕ್ಯಾಮಾರ ಆನ್ ಮಾಡಿದರು. ಅಚಿಂತ್ಯ: ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮಂಗಳೂರಿನ ಶ್ರೀಕೃಷ್ಣ ಕಾಂತಿಲ ಗ್ರಾಫಿಕ್ಸ್ ಡಿಸೈನರ್ ಹಾಗೂ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಕಥೆ ಬರೆದು ನಿರ್ದೇಶನ ಮಾಡುತ್ತಿರುವ ಶಂಕರ್‌ನಾಗ್.ಎಸ್.ಎಸ್. ಅವರಿಗೆ ಎರಡನೇ ಅವಕಾಶ. ಆರೋಗ್ಯದಲ್ಲಿ […]Read More
ಡಾ. ರಾಜ್ ಕುಮಾರ್ ಕುಟುಂಬದ ಸದಸ್ಯರು ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದರು. ಕಂಠೀರವ ಸ್ಟುಡಿಯೋ ಜಾಗದಲ್ಲಿ ರಾಜ್ ಕುಮಾರ್ ಕುಟುಂಬದ ಮೂವರ ಸಮಾಧಿಗಳು ಇರುವುದರಿಂದ ಅವುಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗಳಿವೆ. ಅಲ್ಲದೆ ಡಾ.ರಾಜ್ ಕುಮಾರ್ ಪುಣ್ಯಭೂಮಿ ಟ್ರಸ್ಟ್ ಕೂಡ ಅಲ್ಲೇ ಇದೆ. […]Read More