ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ಉಸಿರೇ ಉಸಿರೇ” ಚಿತ್ರದ ಟೀಸರ್ ಬಿಡುಗಡೆ.. ಇದು ರಾಜೀವ್(ಬಿಗ ಬಾಸ್ ಖ್ಯಾತಿ) ನಾಯಕರಾಗಿ ನಟಿಸಿರುವ ಚಿತ್ರ
ಈಗಾಗಲೇ ಟೀಸರ್ ನಲ್ಲಿರುವ ಸಂಗೀತ, ಹೀರೊ ಎಂಟ್ರಿ ಆಲಿ ಬ್ರಹ್ಮನಂದಮ್ ಕಾಮಿಡಿ ದೇವರಾಜ್ ರವರ ಪಾತ್ರ ಹಾಗೂ ಸಂಭಾಷಣೆ ಪ್ರೇಕ್ಷಕರ ಮನಸನ್ನು ದೋಚಿ ಒಂದೇ ದಿನದಲ್ಲಿ ಒಂದು ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆದಿದೆ..
“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹಾಗೂ ಕಿಚ್ಚ ಸುದೀಪ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.
