ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ನಟಿಸಿರುವ ಬನಾರಸ್”ನ “ಮಾಯಗಂಗೆ” ಹಾಡಿಗೆ ಪ್ರಶಂಸೆಯ ಸುರಿಮಳೆ.
ಕನ್ನಡ ಹಾಗೂ ಮಲೆಯಾಳಂ ನಲ್ಲಿ ಏಕಕಾಲಕ್ಕೆ “ಮಾಯಾಗಂಗೆ” ಹಾಡು ಬಿಡುಗಡೆಯಾದ ನಂತರ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗಿ ಜನಪ್ರಿಯವಾಗಿದೆ.
ಚೆನ್ನೈನಲ್ಲಿ ತಮಿಳಿನಲ್ಲಿ ಈ ಹಾಡನ್ನು ನಟ ವಿಶಾಲ್, ಹೈದರಾಬಾದ್ ನಲ್ಲಿ ನಿರ್ದೇಶಕ ಸುಕುಮಾರ್ ಹಾಗೂ ಮುಂಬೈನಲ್ಲಿ ನಿರ್ದೇಶಕ
ಮಧುರ್ ಭಂಡಾರಕರ್ ಬಿಡುಗಡೆ ಮಾಡಿದರು. ಮುಂಬೈನ ಸಮಾರಂಭಕ್ಕೆ ಖ್ಯಾತ ನಟ ಸಂಜಯ್ ದತ್ ಅವರು ಆಗಮಿಸಿ, ಝೈದ್ ಖಾನ್ ಅವರಿಗೆ ಶುಭ ಕೋರಿದರು.
ಕರ್ನಾಟಕದ ಹೊರಗೂ ನಮ್ಮ “ಬನಾರಸ್” ಚಿತ್ರಕ್ಕೆ ಹಾಗೂ “ಮಾಯಾಗಂಗೆ” ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇಂತಹ ಅದ್ಭುತ ಪ್ರತಿಕ್ರಿಯೆಗೆ ನನ್ನ ಮನ ತುಂಬಿ ಬಂದಿದೆ ಎನ್ನುತ್ತಾರೆ ಝೈದ್ ಖಾನ್.

