• January 1, 2026

‘ವರಾಹ ರೂಪಂ’ ಹಾಡು ಕದ್ದಿಲ್ಲ: ಧರ್ಮಸ್ಥಳದಲ್ಲಿ ಹೇಳಿದ ರಿಷಬ್ ಶೆಟ್ಟಿ

ರಿಷಬ್  ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್  ಮಾಡುತ್ತಿದೆ. ಕಾಂತಾರ 300 ಕೋಟಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಆದರೆ ಚಿತ್ರದ ಕೊನೆಯಲ್ಲಿ ಬರುವ ವರಹಾ ರೂಪಂ ಹಾಡನ್ನು ಕದಿಯಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ಕುರಿತು ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇದೇ ವೇಳೆ ವರಾಹ ರೂಪಂ ಹಾಡಿನ ಕುರಿತು ರಿಷಬ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂತಾರ ಸಿನಿಮಾದ ಕೊನೆಯಲ್ಲಿ ಬರುವ ಕಾಂತಾರ ಚಿತ್ರ ಕೂಡ ಚಿತ್ರದ ಯಶಸ್ಸಿಗೆ ಒಂದು ಕಾರಣವಾಗಿತ್ತು. ಆದರೆ ಈ ಹಾಡಿನ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್‍ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಆದರೂ  ಚಿತ್ರದಲ್ಲಿ ಹಾಡನ್ನು ಮುಂದುವರೆಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ,  ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದಿದ್ದಾರೆ. ಈ ಹಿಂದೆಯೂ ರಿಷಬ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಇದೇ ಮಾತನ್ನು ಹೇಳಿದ್ದರು. ಅಲ್ಲದೆ ಇದೇ ಕಾರಣಕ್ಕೆ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದೆ. ಆದರೆ ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now