• March 14, 2026

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ

ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಹೆಚ್ಚು ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗ್ಲೆ ದೇಶ, ವಿದೇಶದಲ್ಲೂ ಕನ್ನಡಿಗರು ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಂಗದವರು ಮಾತ್ರವಲ್ಲ ರಾಜಕೀಯ ಗಣ್ಯರು ಕಾಂತಾರಕ್ಕೆ ಜೈ ಅಂತಿದ್ದಾರೆ. ಇದೀಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ಮುಂದಾಗಿದ್ದಾರೆ. ಇಂದು ಸಂಜೆ 7 ಗಂಟೆಗೆ ಮಂಗಳೂರಿನ ಪ್ರಭಾತ್ ಚಿತ್ರಮಂದಿರದಲ್ಲಿ ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ಜೊತೆ ಸಿನಿಮಾ ವೀಕ್ಷಿಸಲಿದ್ದಾರೆ. ಅಂದ ಹಾಗೆ ಈ ಹಿಂದೆ ಸಿನಿಮಾ ಆರಂಭಕ್ಕೂ ಮುನ್ನ ನಟ ರಿಷಬ್  ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದರು. ಜೊತೆಗೆ ವೀರೇಂದ್ರ ಹೆಗ್ಗಡೆಯವ ಆಶೀರ್ವಾದ ಪಡೆದು ಸಿನಿಮಾದ ಕುರಿತಾಗಿ ಚರ್ಚಿಸಿದ್ದರು. ಅಂದು ರಿಷಬ್ ಗೆ ಆಶೀರ್ವದಿಸಿ ಕಳಿಸಿದ್ದ ಹೆಗ್ಗಡೆ ಅವರು ಇಂದು ಸ್ವತಃ ಸಿನಿಮಾ ನೋಡುತ್ತಿದ್ದಾರೆ.     ಸಿನಿಮಾ ನೋಡಿದ ಬಳಿಕೆ ವೀರೇಂದ್ರ ಹೆಗ್ಗಡೆ ಅವರು ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಶುರುವಾಗಿದೆ. ನಟ ಚೇತನ್ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು ಸಾಕಷ್ಟು ಮಂದಿ ಚೇತನ್ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ಇದೀಗ ವೀರೇಂದ್ರ ಹೆಗ್ಗಡೆ ಅವರ ಅಭಿಪ್ರಾಯ ಸಾಕಷ್ಟು ಮುಖ್ಯವಾಗಲಿದೆ.     ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಪರಭಾಷೆಗೂ ಡಬ್ ಆಗಿ ಅಲ್ಲೂ ಸೂಪರ್ ಹಿಟ್ ಆಗಿದೆ. ಈಗಾಗ್ಲೆ ನಟ ಪ್ರಭಾಸ್,  ನಟಿ ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಕಂಗಾನ ರಣಾವತ್ ಸೇರಿದಂತೆ ಸಾಕಷ್ಟು ಮಂದಿ ಸಿನಿಮಾ ವೀಕ್ಷಿಸಿದ್ದು ಚಿತ್ರದ ಬಗ್ಗೆ ಮೆಚ್ಚುಗೆ ಮಾತನಾಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now