• January 1, 2026

ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಟೈಟಲ್ ಫಿಕ್ಸ್

ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು ಟೈಟಲ್ ಇಡಲಾಗಿದೆ. ಇಬ್ಬನಿ ತಬ್ಬಿದ ಇಳೆಯಲಿ ಹಿಂದಿನ ಪ್ರಣಯದ ಸಾರವನ್ನು ಸೆರೆಹಿಡಿಯಲು ಮತ್ತು ಇಂದಿನ ಪ್ರೀತಿಯ ಪ್ರಸ್ತುತತೆಯನ್ನು ಅನ್ವೇಷಿಸಲು ಮತ್ತು ಭವಿಷ್ಯದ ಪರೀಕ್ಷೆಯನ್ನು ಗೆಲ್ಲಲು ಸಾಧ್ಯವಾದರೆ ಅದನ್ನು ಸೆರೆಹಿಡಿಯುವ ಪ್ರಯತ್ನವೇ ಇದಾಗಿದೆ. ರಕ್ಷಿತ್ ಶೆಟ್ಟಿ ಅವರ 7 ಆಡ್ಸ್ ತಂಡದ ಸದಸ್ಯರಲ್ಲಿ ಒಬ್ಬರಾಗಿ ‘ಅವನೇ ಶ್ರೀಮನ್ನಾರಾಯಣ’ ಮತ್ತು ‘ಕಿರಿಕ್ ಪಾರ್ಟಿ’ಗೆ ಬರಹಗಾರರಾಗಿ ಕೆಲಸ ಮಾಡಿದ್ದ ಚಂದ್ರಜಿತ್ ಬೆಳ್ಳಿಯಪ್ಪ ಅವರು ಈ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಕಥಾಸಂಗಮದಲ್ಲಿ ‘ರೇನ್‌ಬೊ ಲ್ಯಾಂಡ್‌’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸೆಪ್ಟೆಂಬರ್‌ ನಿಂದ ಚಿತ್ರೀಕರಣ ಆರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now