• January 1, 2026

ಬಾಕ್ಸ್ ಆಫೀಸ್ ನಲ್ಲಿ ಸೋತ ‘ಲೈಗರ್’: ಸಂಭಾವನೆ ಹಿಂದಿರುಗಿಸಿದ ವಿಜಯ್ ದೇವರಕೊಂಡ

ಪುರಿ ಜಗನ್ನಾಥ್ ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್ ನ ಲೈಗರ್ ಸಿನಿಮಾ ಸದ್ದು ಮಾಡಿದಷ್ಟೇ ವೇಗವಾಗಿ ಸೈಲೆಂಟ್ ಆಗಿ ಬಿಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ವಿತರಕರು ಕೂಡ ಸಿನಿಮಾದ ಲಾಸ್ ಬಗ್ಗೆ ಮಾತನಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಸಿನಿಮಾ ಎಂಬ ಕಾರಣಕ್ಕೆ ಲೈಗರ್ ಸಾಕಷ್ಟು ಸದ್ದು ಮಾಡಿತ್ತು. ಯಾಕಂದ್ರೆ ವಿಜಯ್ ನಟನೆಯ ಸಾಕಷ್ಟು ಸಿನಿಮಾಗಳು ಬಾಕ್ಸ್ ಆಫೀಸ್ ದೋಚಿ ಬಿಟ್ಟಿದ್ದವು. ಜೊತೆಗೆ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಕೂಡ ಇದ್ದಿದ್ರಿಂದ ಸಿನಿಮಾ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿತ್ತು. ಆದ್ರೆ ಅಭಿಮಾನಿಗಳ ನಿರೀಕ್ಷೆಯನ್ನು ಮುಟ್ಟುವಲ್ಲಿ ಸಿನಿಮಾ ಸಕ್ಸಸ್ ಆಗಿಲ್ಲ. ಈ ಕಾರಣಕ್ಕೆ ನಿರ್ಮಾಪಕರ ನಷ್ಟವನ್ನು ಭರಿಸಲು ವಿಜಯ್ ದೇವರಕೊಂಡ ಮುಂದಾಗಿದ್ದಾರೆ. ವಿಜಯ್ ದೇವರಕೊಂಡ ಲೈಗರ್ ಸಿನಿಮಾಗೆ 15 ಕೋಟಿ ಸಂಭಾವನೆ ಪಡೆದುಕೊಂಡಿದ್ದರು. ಆದರೆ ಸಿನಿಮಾದಿಂದ ನಿರ್ಮಾಪಕರು ನಷ್ಟ ಅನುಭವಿಸಿದ ಕಾರಣಕ್ಕೆ ಆರು ಕೋಟಿಯನ್ನು ವಾಪಸ್ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಂಭಾವನೆ ಹಿಂದಿರುಗಿಸುವ ಬಗ್ಗೆ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಗೆ ವಿಜಯ್ ದೇವರಕೊಂಡ ತಿಳಿಸಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಪುರಿ ಹಾಗೂ ವಿಜಯ್ ದೇವರಕೊಂಡ ಕಾಂಬಿನೇಷನ್ ನಲ್ಲಿ ಮೂಡಿ ಬರಬೇಕಿದ್ದ ಜನ ಗಣ ಮನ ಸಿನಿಮಾ ಕೂಡ ನಿಂತು ಹೋಗಿದೆ. ಒಟ್ನಲ್ಲಿ ನಿರ್ಮಾಪಕರ ಕಷ್ಟ ಅರ್ಥ ಮಾಡಿಕೊಂಡು ಸಂಭಾವನೆ ಹಿಂದಿರುಗಿಸಲು ಮುಂದಾಗಿರುವ ವಿಜಯ್ ನಿಜಕ್ಕೂ ಗ್ರೇಟ್ ಎಂದೇ ಹೇಳಲಾಗ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now